Home> Karnataka
Advertisement

ಹಳ್ಳಿಗಳಲ್ಲಿ ಕರೆಂಟ್ ಸಿಗೋದೇ ಡೌಟು: ಹೈ ಸ್ಪೀಡ್ ಇಂಟರ್‌ನೆಟ್‌ ಕೊಡ್ತಾರಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್‌ನೆಟ್‌ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.‌ ಭಾರತ್ ನೆಟ್ ಸಹಯೋಗದಲ್ಲಿ ಈ ಕೆಲಸ ಆಗಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹಳ್ಳಿಗಳಲ್ಲಿ ಕರೆಂಟ್ ಸಿಗೋದೇ ಡೌಟು: ಹೈ ಸ್ಪೀಡ್ ಇಂಟರ್‌ನೆಟ್‌ ಕೊಡ್ತಾರಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್‌

ಬೆಂಗಳೂರು: ಹಳ್ಳಿಗಳಲ್ಲಿ ಸರಿಯಾಗಿ ವಿದ್ಯುತ್ ಸಿಗುತ್ತದೆ ಎಂಬುದೇ ಖಾತರಿಯಿಲ್ಲ. ಆದರೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹೈ ಸ್ಪೀಡ್ ಇಂಟರ್‌ನೆಟ್‌ ಸೌಲಭ್ಯ ಕೊಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್‌ ಹೇಳಿದಾರೆ.

ಹೌದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್‌ (S Suresh Kumar) ಹೀಗೆ ಹೇಳಿದ್ದಾರೆ. 'ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್‌ನೆಟ್‌ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.‌ ಭಾರತ್ ನೆಟ್ ಸಹಯೋಗದಲ್ಲಿ ಈ ಕೆಲಸ ಆಗಲಿದೆ' ಎಂದಿದ್ದಾರೆ.

ಇದನ್ನೂ ಓದಿ: ಜ.1ರಿಂದ ಶಾಲೆ ಪುನರಾರಂಭ, ಆದರೆ ಕಂಡೀಷನ್ ಅಪ್ಲೇ!

COVID-19 ಕಾರಣಕ್ಕೆ ಎಲ್ಲವೂ ಬದಲಾಗಿದ್ದು ಈಗ ತಂತ್ರಜ್ಞಾನದ ಆಧಾರಿತ ಕಲಿಕೆಗೆ ವಿಶೇಷ ಒತ್ತು ನೀಡುವುದು ಅನಿವಾರ್ಯವಾಗಿದೆ. ಈ ಹಿನ್ನಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮಾಲೋಚನೆ ನಡೆಸಲಾಗಿದೆ. ಮೊದಲಿಗೆ ಕ್ಲಸ್ಟರ್ ಮಟ್ಟದ ಶಾಲೆಗಳಲ್ಲಿ ಹೈ ಸ್ಪೀಡ್ ಇಂಟರ್‌ನೆಟ್‌ (High Speed Internet) ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಮುಂದಿನ ಒಂದು ವರ್ಷದೊಳಗೆ ಈ ಉದ್ದೇಶ ಈಡೇರುವ ನಿರೀಕ್ಷೆ ಇದೆ‌ ಎಂದಿದ್ದಾರೆ. 

ಇದನ್ನೂ ಓದಿ: ದುಬಾರಿ ಶುಲ್ಕ ಪಾವತಿ ಬಗ್ಗೆ ಫೇಸ್‌ಬುಕ್‌ನಲ್ಲಿ ಅಳಲು ತೋಡಿಕೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬಿಸಿಯೂಟಕ್ಕೆ ಬೇಳೆಕಾಳು:
COVID-19 ಕಾರಣಕ್ಕೆ ಶಾಲೆಗಳಲ್ಲಿ  (Schools)  ಈಗ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಇರುವುದಿಲ್ಲ. ಬದಲಿಗೆ ಮಕ್ಕಳ ಮನೆಗೇ ಆಹಾರ ಸಾಮಗ್ರಿಗಳನ್ನು ಪೂರೈಸಲಾಗುತ್ತಿದೆ. ಹೈಕೋರ್ಟ್‌ ಸೂಚನೆ ಮೇರೆಗೆ ಬಿಸಿಯೂಟ ಯೋಜನೆಯಡಿ ಬೇಳೆ ಕಾಳುಗಳನ್ನು ನೀಡುವ ಕಾರ್ಯಕ್ರಮ ಕೂಡ ಮುಂದುವರಿಯಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Read More