Home> Karnataka
Advertisement

ಕೆರೆಗೆ ಜಿಗಿದು ಆತ್ಮಹತ್ಯೆಗೆ ಯತ್ನ: ಮಹಿಳೆ ರಕ್ಷಿಸಿದ ಟ್ರಾಫಿಕ್ ಪೊಲೀಸ್‍ಗೆ 5 ಸಾವಿರ ಬಹುಮಾನ, CM ಪದಕ

Traffic police constable rescues woman: ಮಹಿಳೆಯ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕತ್ಸೆಗಾಗಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೆರೆಗೆ ಜಿಗಿದು ಆತ್ಮಹತ್ಯೆಗೆ ಯತ್ನ: ಮಹಿಳೆ ರಕ್ಷಿಸಿದ ಟ್ರಾಫಿಕ್ ಪೊಲೀಸ್‍ಗೆ 5 ಸಾವಿರ ಬಹುಮಾನ, CM ಪದಕ

ಬೆಳಗಾವಿ: ಕೆರೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ಟ್ರಾಫಿಕ್ ಪೊಲೀಸ್ ಕಾನ್ಸ್‍ಟೇಬಲ್ ರಕ್ಷಿಸಿರುವ ಘಟನೆ ಬೆಳಗಾವಿಯ ಅಶೋಕ ವೃತ್ತದ ಕೋಟೆ ಕೆರೆಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ ಶಿವಲೀಲಾ ಪರ್ವತಗೌಡ(42) ಕೆರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದವರು.

ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಶಿವಲೀಲಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಕೆರೆಗೆ ಹಾರಿದ್ದ ಅವರು ನೀರಿನಲ್ಲಿ ಮುಳುಗುತ್ತಿದ್ದರು. ಕೂಡಲೇ ಸಮೀಪದ ಅಶೋಕ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉತ್ತರ ಸಂಚಾರಿ ಪೊಲೀಸ್ ಕಾನ್ಸ್‍ಟೇಬಲ್ ಕಾಶಿನಾಥ್ ಈರಗಾರ್ ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ಅವರನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಿ.ಕೆ.ಹರಿಪ್ರಸಾದ್ ಆಕ್ರೋಶ

ಮಹಿಳೆಯ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕತ್ಸೆಗಾಗಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕೆರೆಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಕಾಶಿನಾಥ್ ಅವರಿಗೆ ಸಾರ್ವಜನಿಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಅವರ ಸಮಯಪ್ರಜ್ಞೆ ಮತ್ತು ಸಾಹಸವನ್ನು ಮೆಚ್ಚಿಕೊಂಡಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ 5 ಸಾವಿರ ರೂ. ಬಹುಮಾನ ಘೋಷಿಸಿದ್ದಾರೆ. ಇದಲ್ಲದೆ ಮುಖ್ಯಮಂತ್ರಿ ಪದಕಕ್ಕೆ ಕಾಶೀನಾಥ್ ಅವರ ಹೆಸರನ್ನು ಶಿಫಾರಸು ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರಿನ ಹೆಸರಿನಡಿ ಬೀದಿಬದಿ ವ್ಯಾಪಾರಿಗಳ ಬದುಕಿಗೆ ಕೊಳ್ಳಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More