Home> Karnataka
Advertisement

ಎಲ್ಲರೂ ಒಟ್ಟಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ: ತುಷಾರ್ ಗಿರಿ ನಾಥ್

ನೀವೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲಾ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್

ಎಲ್ಲರೂ ಒಟ್ಟಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ: ತುಷಾರ್ ಗಿರಿ ನಾಥ್

Lok Sabha Election: ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಮತ ಚಲಾಯಿಸಿ ಪ್ರಜುಪ್ರಭುತ್ವವನ್ನು ಗೆಲ್ಲಿಸೋಣವೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

ಲೋಕಸಭಾ ಚುನಾವಣೆ (Lok sabha Election) ಹಿನ್ನೆಲೆ ಲಾಲ್‌ಬಾಗ್ 1ನೇ ಮುಖ್ಯದ್ವಾರದಿಂದ ಹಮ್ಮಿಕೊಂಡಿದ್ದ "ಮತದಾನ ಜಾಗೃತಿ ಕಾಲ್ನಡಿಗೆ ಜಾಥಾ" ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವೆಲ್ಲರೂ ಯುವ ಮತದಾರರಾಗಿದ್ದು, ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲಾ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕೆಂದು ಮನವಿ ಮಾಡಿದರು. 

ಇದನ್ನೂ ಓದಿ- Voter ID ಕಳೆದುಹೋಗಿದೆಯೇ? ಈ ದಾಖಲೆಗಳನ್ನು ನೀಡಿ ಮತ ಚಲಾಯಿಸಬಹುದು!

ಬೆಂಗಳೂರಿನಲ್ಲಿ ಕಳೆದ ಚುನಾವಣೆಯಲ್ಲಿ ಶೇ. 54 ರಷ್ಟು ಮತದಾನವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಮತದಾನದ ಶೇಖಡವಾರು ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಾನಾ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ವಿವಿಧ 17 ಕಾಲೇಜುಗಳ ವಿದ್ಯಾರ್ಥಿಗಳು ಭಾಗಿ:
ಮಹಾರಾಣಿ ಕಾಲೇಜು, ವಿವೇಕಾನಂದ ಪದವಿ ಕಾಲೇಜು, ವಿಜಯ ಕಾಲೇಜು, ಸರ್ಕಾರಿ ಕಲಾ ಕಾಲೇಜು, ಎಸ್.ಎಲ್.ಎನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸೇರಿದಂತೆ 17 ವಿವಿಧ ಕಾಲೇಜುಗಳಿಂದ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ- ಈ ದೇಶದಲ್ಲಿ ಇರುವ ಅಸಮಾನತೆ ಹೋಗಲಾಡಿಸುವುದೇ ನಮ್ಮ ಗುರಿ: ಪ್ರಜಾಧ್ವನಿ 2 ಯಾತ್ರೆಯಲ್ಲಿ ರಾಹುಲ್ ಗಾಂಧಿ

ಘೋಷಣೆಗಳನ್ನು ಕೂಗುತ್ತಾ ಸಾಗಿದ ವಿದ್ಯಾರ್ಥಿಗಳು:
ಲಾಲ್‌ಬಾಗ್ ನಲ್ಲಿರುವ ವಾಯುವಿಹಾರ ಮಾರ್ಗದಲ್ಲಿ ಸುಮಾರು 4 ಕಿ.ಮೀ ಕಾಲ್ನಡಿಯ ಜಾಥಾ ಮೂಲಕ ಸಾಗಿ ವಾಯುವಹಾರಿಗಳಲ್ಲಿ ಏಪ್ರಿಲ್ 26 ರಂದು ತಪ್ಪದೆ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ವಿದ್ಯಾರ್ಥಿಗಳು ‘ಪ್ರಜಾಪ್ರಭುತ್ವಕ್ಕೆ ಮತದಾನ ನೀಡಿ’, ‘ನನ್ನ ಮತ ದೇಶಕ್ಕೆ ಹಿತ’, ‘ಚುನಾವಣಾ ಪರ್ವ ದೇಶದ ಗರ್ವ’, ‘26ರಂದು ಮತ ಚಲಾಯಿಸಿ’ ಸೇರಿದಂತೆ ಇನ್ನಿತರೆ ಘೋಷಣೆಗಳನ್ನು ಕೂಗುತ್ತಾ ಜಾಥಾ ಸಾಗಿತು. 

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ ಸೇರಿದಂತೆ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More