Home> Lifestyle
Advertisement

ಮಾದಪ್ಪನ ಬೆಟ್ಟದಲ್ಲಿ ರಥೋತ್ಸವ ಸಂಪನ್ನ: ಲಕ್ಷಾಂತರ ಮಂದಿ ಭಾಗಿ

Shivratri Jatre: ಶ್ರೀ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ  ಶಾಂತ ಮಲ್ಲಿಕಾರ್ಜುನ ಸ್ವಾಮಿ, ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು , ತಳಿರು ತೋರಣ, ಬಣ್ಣದ ಬಟ್ಟೆಗಳಿಂದ  ಸಿಂಗರಿಸಲಾಗಿತ್ತು.

ಮಾದಪ್ಪನ ಬೆಟ್ಟದಲ್ಲಿ ರಥೋತ್ಸವ ಸಂಪನ್ನ: ಲಕ್ಷಾಂತರ  ಮಂದಿ ಭಾಗಿ

Shivratri Jatre Maharathotsav at Male Mahadeshwar Hill: ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೊನೆಯ ದಿನವಾದ ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಶ್ರೀ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ  ಶಾಂತ ಮಲ್ಲಿಕಾರ್ಜುನ ಸ್ವಾಮಿ, ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು , ತಳಿರು ತೋರಣ, ಬಣ್ಣದ ಬಟ್ಟೆಗಳಿಂದ  ಸಿಂಗರಿಸಲಾಗಿತ್ತು.

ರಥೋತ್ಸವಕ್ಕೂ ಮುನ್ನ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ  ಅರ್ಚಕ ವೃಂದದವರು ದೇಗುಲದ ಗರ್ಭಗುಡಿಯಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಆನೆ ಉತ್ಸವ ನೆರವೇರಿಸಲಾಯಿತು. ನಂತರ ತೇರಿನ ಬಳಿ ಧಾರ್ಮಿಕ ವಿಧಿ ವಿಧಾನ ಪೂಜಾ ಕೈಂಕರ್ಯ ನೆರವೇರಿಸಿ ಉತ್ಸವ ಮೂರ್ತಿ ಇರಿಸಿ ಬೂದುಕುಂಬಳಕಾಯಿ ದೃಷ್ಟಿ ತೆಗೆದು ಮಹಾಮಂಗಳಾರತಿ  ಹಾಗೂ ಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳು ಬೆಲ್ಲದ ಆರತಿ ಬೆಳಗಿದ ನಂತರ ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಇದನ್ನೂ ಓದಿ- Dogs Crying: ನಾಯಿಗಳು ರಾತ್ರಿ ಹೊತ್ತು ಅಳುವುದೇಕೆ? ದೆವ್ವ ಕಾಣೋದಕ್ಕಲ್ಲ.. ಇದು ಅಸಲಿ ಸತ್ಯ..!

ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ ಸೂರಿಪಾನಿ, ಛತ್ರಿ, ಚಾಮರ, ನಂದಿ ದ್ವಜ ಹಾಗೂ ಮಂಗಳವಾದ್ಯದೊಂದಿಗೆ ತೇರನ್ನು ಎಳೆಯಲಾಯಿತು. ಹುಲಿವಾಹನ ಬಸವ ವಾಹನ ಹಾಗೂ ರುದ್ರಾಕ್ಷಿ  ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ ಗಮನ ಸೆಳೆಯಿತು .ಭಕ್ತರು ತೇರಿಗೆ ಹಣ್ಣು ಜವನ, ದವಸ ಧಾನ್ಯಗಳನ್ನು ಎಸೆದು ಮಾದಪ್ಪನ ಕೃಪೆಗೆ ಪಾತ್ರರಾದರು. 

ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಸೂಕ್ತ ಪೊಲೀಸ್ ಬಂದೋಬಸ್ತ್: 
ರಥೋತ್ಸವದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ತೇರು ಸಂಚರಿಸುವ ಮಾರ್ಗದಿಂದ ದೂರ ಇರುವಂತೆ ಪ್ರಾಧಿಕಾರದ ವತಿಯಿಂದ ಭಕ್ತರಿಗೆ ಅರಿವು ಮೂಡಿಸಲಾಗುತ್ತಿತ್ತು. ನೆರೆದಿದ್ದ ಭಕ್ತರು ನಾ ಮುಂದು ತಾ ಮುಂದು ಎಂದು ತೇರನ್ನು ಎಳೆಯಲು ಮುಂದಾದಾಗ ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಇದನ್ನೂ ಓದಿ- ರಾಮ ಭಕ್ತರಿಗೆ ಗುಡ್‌ ನ್ಯೂಸ್‌..! 9 ದಿನಗಳ ಅಯೋಧ್ಯಾ ಪ್ರವಾಸದ ಪ್ಯಾಕೇಜ್ ಅತೀ ಕಡಿಮೆ ಬೆಲೆಗೆ..!

ಊರುಗಳತ್ತ ಮುಖ ಮಾಡಿದ ಭಕ್ತರು: 
ಕಳೆದ ಐದು ದಿನಗಳಿಂದ ಮಲೆ ಮಾದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದ್ದ ಭಕ್ತಾದಿಗಳು ಸೋಮವಾರ ರಥೋತ್ಸವ ಮುಗಿದ ಬಳಿಕ ತಮ್ಮ ಗ್ರಾಮಗಳಿಗೆ ಹಿಂದಿರುಗಿದರು. ಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ವಾರದ ಹಿಂದೆ ಲಕ್ಷಕ್ಕೂ ಹೆಚ್ಚಿನ ಭಕ್ತರು ಪಾದಯಾತ್ರೆಯ ಮೂಲಕ ಆಗಮಿಸಿ ಬೀಡು ಬಿಟ್ಟಿದ್ದರು. ಅಲ್ಲದೆ ಎರಡು ದಿನಗಳಿಂದ ವಾಹನಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಸ್ಥಾನದ ರಂಗಮಂದಿರ ಹಾಗೂ ಇನ್ನಿತರ ವಸತಿಗೃಹಗಳಲ್ಲಿ ವಾಸ್ತವ್ಯ ಹೂಡಿ ರಥೋತ್ಸವದ ಬಳಿಕ ಗ್ರಾಮಗಳತ್ತ ವಾಪಸ್ ತೆರಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More