Home> Lifestyle
Advertisement

ಬೇಸಿಗೆಯಲ್ಲಿ ಆರೋಗ್ಯವಾಗಿರಲು ಈ ಆಹಾರಗಳಿಂದ ದೂರವಿರಿ..!

Summer food recipes : ಬೇಸಿಗೆಯಲ್ಲಿಯೂ ಕೆಲವು ಜನರು ಚಹಾ-ಕಾಫಿಯನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಬೇಸಿಗೆಯಲ್ಲಿ ಈ ಬಿಸಿ ಪಾನೀಯಗಳನ್ನು ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಬೇಕು. ಇಲ್ಲದಿದ್ದರೆ, ಆರೋಗ್ಯ ಸಮಸ್ಯೆ ಹೆಚ್ಚಾಗುತ್ತದೆ.

ಬೇಸಿಗೆಯಲ್ಲಿ ಆರೋಗ್ಯವಾಗಿರಲು ಈ ಆಹಾರಗಳಿಂದ ದೂರವಿರಿ..!

Summer food tips : ಈಗಾಗಲೇ ಬೇಸಿಗೆ ಶುರುವಾಗಿದೆ. ಬಿಸಿಲ ಧಗೆ ನಿಧಾನವಾಗಿ ಹೆಚ್ಚುತ್ತಿದೆ. ಈ ವರ್ಷ ಸೂರ್ಯನ ಶಾಖ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ನಮ್ಮ ಆರೋಗ್ಯ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕಾಗಿ ದೇಹವನ್ನು ಸದಾ ಹೈಡ್ರೇಟ್‌ ಆಗಿ ಇಡಬೇಕಾಗುತ್ತದೆ. 

ಬೇಸಿಗೆಯಲ್ಲಿ ಹೆಚ್ಚಾಗಿ ಎಣ್ಣೆಯುಕ್ತ ಮತ್ತು ಕರಿದ ಆಹಾರ ಪದಾರ್ಥಗಳಿಂದ ದೂರವಿರುವುದು ಉತ್ತಮ. ಜಂಕ್ ಫುಡ್‌ಗಳು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ವಿಶೇಷವಾಗಿ ಬೇಸಿಗೆಯಲ್ಲಿ ಸಂಸ್ಕರಿಸಿದ ಮತ್ತು ಕರೀದ ಆಹಾರ ಪದಾರ್ಥಗಳನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಎಣ್ಣೆ ಪದಾರ್ಥ ಸೇವನೆಯಿಂದ ಹೊಟ್ಟೆ ಭಾರವಾಗುತ್ತದೆ ಹಾಗೂ ಜೀರ್ಣಕ್ರಿಯೆ ನಿಧಾನವಾಗುತ್ತದೆ.

ಇದನ್ನೂ ಓದಿ: ಕೂದಲು ಉದುರುವುದನ್ನು ತಡೆಯಲು ರಾಮಬಾಣ ಈ ಎಣ್ಣೆ! ಆದರೆ ಹೀಗೆ ಬಳಸಿ

ಬೇಸಿಗೆ ಕಾಲದಲ್ಲಿ ದಿನವಿಡೀ ಚಹಾ-ಕಾಫಿಯನ್ನು ಕುಡಿಯುವುದನ್ನು ನಿಲ್ಲಿಸಬೇಕು. ಬಿಸಿ ಪಾನೀಯಗಳ ಸೇವನೆಯನ್ನು ತೀರಾ ಕಡಿಮೆ ಮಾಡಿ. ಇಲ್ಲದಿದ್ದರೆ, ಇದ್ರಿಂದ ಪಿತ್ತ ಹೆಚ್ಚಾಗುವ ಸಾಧ್ಯತೆ ಇದೆ. ದೇಹದ ಆಂತರಿಕ ಉಷ್ಣತೆಯೂ ಹೆಚ್ಚಾಗುತ್ತದೆ ಹಾಗು ಜೀರ್ಣಾಂಗ ವ್ಯವಸ್ಥೆಗೆ ತೊಂದರೆಯುಂಟಾಗುತ್ತದೆ. 

ಚಿಕನ್-ಮಟನ್ ನಂತಹ ಆಹಾರಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ. ಹಾಗಾಗಿ ಬೇಸಿಗೆಯಲ್ಲಿ ಮಾಂಸದಿಂದ ದೂರವಿರುವುದು ಉತ್ತಮ. ಅಲ್ಲದೆ, ಹೆಚ್ಚು ಮಸಾಲೆಯುಕ್ತ ಆಹಾರ ತಿನ್ನಬಾರದು. ಇದು ಅತಿಯಾದ ಬೆವರುವಿಕೆಗೆ ಮತ್ತು ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ:ಕೇವಲ 2 ನಿಮಿಷದಲ್ಲಿ ಕೊಳಕು ಹಳದಿ ಹಲ್ಲು ಮುತ್ತಿನಂತೆ ಹೊಳೆಯಲು ಇದೊಂದೇ ಉಪಾಯ.!

ಹೊಟ್ಟೆ ತಣ್ಣಗಾಗುತ್ತೆ ಅಂತ ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಸೇವಿಸಬೇಡಿ. ಐಸ್ ಕ್ರೀಮ್ ಜೀರ್ಣಕ್ರಿಯೆಯ ಸಮಯದಲ್ಲಿ ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ನೆಗಡಿ, ಜ್ವರ ಕಾಡುತ್ತದೆ. ಆದ್ದರಿಂದ ಇಂತಹ ಕೃತಕ ಪಾನೀಯಗಳಿಂದ ದೂರವಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More