PHOTOS

Benefits Of Fruits: ವೈದ್ಯರಿಂದ ದೂರ ಉಳಿಯಲು ನಿಮ್ಮ ಡಯಟ್ನಲ್ಲಿರಲಿ ಈ 5 ಹಣ್ಣುಗಳು

Benefits Of Fruits: ಹಣ್ಣುಗಳು ಆರೋಗ್ಯಕರವಾಗಿರಲು ಸಹಾಯ ಮಾಡುವ ಅನೇಕ ವಿಟಮಿನ್‌ಗಳನ್ನು ಹೊಂದಿರುತ್ತವೆ.  ಹಾಗಾಗಿ ಇದು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್...

Advertisement
1/6
ಹಣ್ಣುಗಳು
ಹಣ್ಣುಗಳು

ಸೊಪ್ಪು-ತರಕಾರಿಗಳು ನಮ್ಮ ಆಹಾರದ ಭಾಗವಾಗಿರುವಂತೆ ಹಣ್ಣುಗಳನ್ನು ಸಹ ದೈನಂದಿನ ಆಹಾರದಲ್ಲಿ ಸೇರಿಸುವುದು ಆರೋಗ್ಯಕ್ಕೆ ಅತ್ಯುತ್ತಮ ಎಂದು ಪರಿಗಣಿಸಲಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಡಯಟ್ನಲ್ಲಿ ಕೆಲವು ಹಣ್ಣುಗಳನ್ನು ಸೇರಿಸುವುದರಿಂದ ಅದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. 

2/6
ಕಿತ್ತಳೆ
ಕಿತ್ತಳೆ

ಕಿತ್ತಳೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು ಇದರ ಸೇವನೆಯಿಂದ  ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

3/6
ಕಿವಿ
ಕಿವಿ

ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಇ ಸೇರಿದಂತೆ  ಪೊಟ್ಯಾಸಿಯಮ್ ಕೂಡ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವುದರ ಜೊತೆಗೆ ಬಿಪಿಯನ್ನು ನಿಯಂತ್ರಣದಲ್ಲಿರುತ್ತದೆ. 

4/6
ನಿಂಬೆ ಹಣ್ಣು
ನಿಂಬೆ ಹಣ್ಣು

ನಿಂಬೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಅನ್ನು ಹೊಂದಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನಿತ್ಯ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಬೆರೆಸಿ ಕುಡಿಯುವುದು ಆರೋಗ್ಯಕರ. 

5/6
ಮಾವಿನ ಹಣ್ಣು
ಮಾವಿನ ಹಣ್ಣು

ಸೀಮಿತ ಪ್ರಮಾಣದಲ್ಲಿ ಮಾವಿನ ಹಣ್ಣಿನ ಸೇವನೆಯು ಉದರದ ಆರೋಗ್ಯ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.

6/6
ಸ್ಟ್ರಾಬೆರಿ
ಸ್ಟ್ರಾಬೆರಿ

ಫೈಬರ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿರುವ ಸ್ಟ್ರಾಬೆರಿ ಹಣ್ಣುಗಳನ್ನು ದೈನಂದಿನ ಆಹಾರದಲ್ಲಿ ಸೇರಿಸುವುದರಿಂದ ಇದು ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 





Read More