PHOTOS

White hair Remedies:ಈ ಎಲೆಯನ್ನು ಹೀಗೆ ಬಳಸಿ ತಲೆಯಲ್ಲಿ ಒಂದೇ ಒಂದು ಬಿಳಿ ಕೂದಲು ಕಾಣಿಸುವುದಿಲ್ಲ !ಬುಡದಿಂದಲೇ ಕಪ್ಪಾಗುವುದು ಬಿಳಿ ಕೂದಲು

ಿಸುವ ಆಹಾರ  ನಮ್ಮ ಕೂದಲಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಕೆಟ್ಟ ಆಹಾರ ಪದ್ದತಿಯಿಂದಾಗಿ ಕೂದಲು ಉದುರುವುದು, ಕಿರಿ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು, ...

Advertisement
1/5
ಕೂದಲಿನ ಮೇಲೆ ಪರಿಣಾಮ
ಕೂದಲಿನ ಮೇಲೆ ಪರಿಣಾಮ

ನಾವು ಸೇವಿಸುವ ಆಹಾರ  ನಮ್ಮ ಕೂದಲಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಕೆಟ್ಟ ಆಹಾರ ಪದ್ದತಿಯಿಂದಾಗಿ ಕೂದಲು ಉದುರುವುದು, ಕಿರಿ ವಯಸ್ಸಿನಲ್ಲಿ ಕೂದಲು ಬೆಳ್ಳಗಾಗುವುದು, ಶುಷ್ಕ ಕೂದಲು, ತಲೆ ಹೊಟ್ಟು ಮುಂತಾದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. 

2/5
ನೈಸರ್ಗಿಕ ಪರಿಹಾರ
ನೈಸರ್ಗಿಕ ಪರಿಹಾರ

ಈ ಸಮಸ್ಯೆಯ ಪರಿಹಾರವಾಗಿ  ನಾವು ಬಳಸುವ ದುಬಾರಿ ಪ್ರಾಡಕ್ಟ್ ಗಳು ಕೂದಲಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವುದಿಲ್ಲ. ಅಲ್ಲದೆ ಇವುಗಳಿಂದ ಅಡ್ಡ ಪರಿಣಾಮದ ಭಯ ಕೂಡಾ ಕಾಡುತ್ತದೆ. ಆದರೆ ಈಗ  ನಾವು ಹೇಳುವ ಮನೆಮದ್ದನ್ನು ಬಳಸಿದರೆ ಕೂದಲಿನ ಸಮಸ್ಯೆಗೆ ನೈಸರ್ಗಿಕ ಪರಿಹಾರ ಸಿಗುತ್ತದೆ. 

3/5
ಕೂದಲಿನ ಆರೋಗ್ಯಕ್ಕೆ ಕರಿ ಬೇವು :
ಕೂದಲಿನ ಆರೋಗ್ಯಕ್ಕೆ ಕರಿ ಬೇವು :

ಮೆಲನಿನ್ ಮತ್ತು ನ್ಯೂ ಮೆಲನಿನ್ ಎನ್ನುವ ಅಂಶಗಳು ನಮ್ಮ ಕೂದಲಿನ ಬಣ್ಣಕ್ಕೆ ಕಾರಣವಾಗಿರುತ್ತವೆ. ಕೂದಲಿಗೆ ಕಪ್ಪು ಬಣ್ಣವನ್ನು ನೀಡುವ ಮೆಲನಿನ್ ಕೊರತೆಯಿಂದಾಗಿ, ಕೂದಲು ಬಿಳಿಯಾಗುತ್ತವೆ. ಕರಿಬೇವಿನ ಎಲೆಗಳು ಕೂದಲಿನಲ್ಲಿರುವ ಮೆಲನಿನ್ ಕೊರತೆಯನ್ನು ಹೋಗಲಾಡಿಸುತ್ತದೆ. ಹೀಗಾಗಿ ಕರಿಬೇವು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ. 

4/5
ಕರಿಬೇವಿನ ಎಲೆಗಳನ್ನು ಬಳಸುವುದು ಹೇಗೆ ? :
ಕರಿಬೇವಿನ ಎಲೆಗಳನ್ನು ಬಳಸುವುದು ಹೇಗೆ ? :

ಕರಿಬೇವಿನ ಎಲೆಗಳನ್ನು ಬಳಸಿ ಹೇರ್ ಮಾಸ್ಕ್ ಮಾಡಬಹುದು. ಇದಕ್ಕಾಗಿ ಕರಿಬೇವಿನ ಎಲೆ,  ತೆಂಗಿನ ಎಣ್ಣೆ, ಬೇವಿನ ಎಲೆಗಳು, ವಿಟಮಿನ್ ಇ ಕ್ಯಾಪ್ಸುಲ್ ಗಳು ಮತ್ತು ಮೊಸರು ಬೇಕಾಗುತ್ತದೆ. ಮೊದಲು ಕರಿಬೇವಿನ  ಎಲೆ ಮತ್ತು ಬೇವಿನ ಸೊಪ್ಪನ್ನು ಮಿಕ್ಸಿಯಲ್ಲಿ ರುಬ್ಬಿ ಕೊಳ್ಳಿ. ನಂತರ ಇನ್ನೊಂದು ಪಾತ್ರೆಯಲ್ಲಿ ತೆಂಗಿನೆಣ್ಣೆ, ವಿಟಮಿನ್ ಇ ಕ್ಯಾಪ್ಸುಲ್ ಮತ್ತು ಮೊಸರು ಹಾಕಿ ಸರಿಯಾಗಿ ಬೀಟ್ ಮಾಡಿ.ಈ ಮಿಶ್ರಣವನ್ನು ಸ್ವಲ್ಪ ಬಿಸಿ ಮಾಡಿ. ಅದು ತಣ್ಣಗಾದ ನಂತರ ಕರಿಬೇವಿನ ಸೊಪ್ಪು ಮತ್ತು ಬೇವಿನ ಸೊಪ್ಪಿನ ಮಿಶ್ರಣವನ್ನು ಹಾಕಿ ಚೆನ್ನಾಗಿ ಕಲಸಿ. ನಿಮ್ಮ ಹೇರ್ ಮಾಸ್ಕ್ ರೆಡಿಯಾಗುತ್ತದೆ. 

5/5
ಈ ರೀತಿ ಕೂದಲಿಗೆ ಹಚ್ಚಿ :
ಈ ರೀತಿ ಕೂದಲಿಗೆ ಹಚ್ಚಿ :

ಕೂದಲಿಗೆ ಹೇರ್ ಮಾಸ್ಕ್ ಅನ್ನು ಹಚ್ಚುವ ಮೊದಲು, ಕೂದಲನ್ನು ಸರಿಯಾಗಿ ತೊಳೆದು ಒಣಗಿಸಿ. ನಂತರ ಕೂದಲು ಮತ್ತು ನೆತ್ತಿಯ ಮೇಲೆ ಹೇರ್ ಮಾಸ್ಕ್ ಅನ್ನು  ಹಚ್ಚಿ. ಒಂದು ಗಂಟೆಯ ನಂತರ ಮತ್ತೆ ಕೂದಲನ್ನು ತೊಳೆಯಿರಿ.ವಾರದಲ್ಲಿ ಎರಡು ಬಾರಿ ಈ ಮನೆಮದ್ದನ್ನು  ಅನುಸರಿಸುತ್ತಾ ಬಂದರೆ  ಅಡ್ಡ ಪರಿನಾಮೈಲ್ಲ್ದೆ ಬಿಳಿ ಕೂದಲು ಕಪ್ಪಾಗುತ್ತದೆ. ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)





Read More