PHOTOS

ಕೊಚ್ಚಿ ಹೋದ ತುಂಗಭದ್ರಾ ಜಲಾಶಯದ ಗೇಟ್,ತ್ವರಿತ ಕ್ರಮಕ್ಕೆ ಸೂಚನೆ

ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಜಲಾಶಯಕ್ಕೆ ಡಿಸಿಎಂ ಡಿಕೆಶಿವಕುಮಾರ್  ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್...

Advertisement
1/4

ಭದ್ರತೆ ದೃಷ್ಟಿಯಿಂದ ಜಲಾಶಯದಿಂದ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಜನಪ್ರತಿನಿಧಿಗಳು ಸೇರಿ ಇತರರನ್ನು ಬಿಡುವಂತಿಲ್ಲ.

2/4

ಇದು ತಾಂತ್ರಿಕ ವಿಷಯವಾಗಿದ್ದು, ಜಲಾಶಯ ರಾಜ್ಯದ ಸಂಪತ್ತು. ಇದನ್ನು ಉಳಿಸಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಕೊಚ್ಚಿ ಹೋಗಿರುವ ತುಂಗಭದ್ರಾ ಜಲಾಶಯದ ಗೇಟ್ ಅಳವಡಿಕೆ ಕಾರ್ಯ ವೇಗ ಪಡೆದುಕೊಂಡಿದ್ದು. ಬೇರೆ ಟೀಕೆ ಟಿಪ್ಪಣೆಗಿಂತ ಮೊದಲು ಗೇಟ್ ಸರಿಪಡಿಸುವುದು ನಮ್ಮ ಆದ್ಯತೆಯಾಗಿದೆ.

3/4

ರೈತರಿಗೆ ಒಂದು ಬೆಳೆಗೆ ನೀರು ಉಳಿಸಬೇಕೆಂದು ತೀರ್ಮಾನಿಸಲಾಗಿದೆ. ನೆರೆ ರಾಜ್ಯಗಳಿಗೆ ಅವರ ಪಾಲಿನ 25 ಟಿಎಂಸಿ ಅಡಿ ನೀರು ಕೊಡಲಾಗಿದೆ. ಇನ್ನು 90 ಟಿಎಂಸಿ ಅಡಿ ಕೊಡಬೇಕಿದೆ. ರೈತರು ಗಾಬರಿಯಾಗುವ ಅಗತ್ಯವಿಲ್ಲ. ಮೂರು ಸರ್ಕಾರ ಒಟ್ಟಾಗಿ ಸಮಸ್ಯೆ ನಿವಾರಿಸಲಿವೆ. ರೈತರನ್ನು ಬದುಕಿಸಲು ಬೇಕಾದ ಕ್ರಮ ತೆಗೆದುಕೊಳ್ಳಲಾಗುವುದು. 

4/4

ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ನಾಲ್ಕು ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಗೇಟ್ ದುರಸ್ತಿ ಜವಾಬ್ದಾರಿ ಅನುಭವಿ ಸಂಸ್ಥೆಗೆ ವಹಿಸಲಾಗಿದೆ.ನಾರಾಯಣ ಎಂಜಿನಿಯರಿಂಗ್ ಹಾಗೂ ಹಿಂದುಸ್ಥಾನ ಕಂಪನಿಗೆ ಜಲಾಶಯದ ವಿನ್ಯಾಸ ನೀಡಲಾಗಿದೆ.ತಾಂತ್ರಿಕ ತಂಡದವರು ನಿನ್ನೆ ರಾತ್ರಿಯೇ ಇಲ್ಲಿಗೆ ಬಂದು ತಕ್ಷಣ ಕೆಲಸ ಆರಂಭಿಸಿದ್ದಾರೆ





Read More