PHOTOS

iQOO Z6 Lite 5G: ಅತ್ಯಂತ ಕಡಿಮೆ ಬೆಲೆಗೆ ಅದ್ಭುತ ಫೀಚರ್ಸ್‌ ಹೊಂದಿರುವ ಸ್ಮಾರ್ಟ್‌ಫೋನ್‌!

iQOO Z6 Lite 5G Smartphone: ದೇಶಿಯ ಮಾರುಕಟ್ಟೆಯಲ್ಲಿ iQOO Z6 Lite 5G ಸ್ಮಾರ್ಟ್‌ಫೋನ್ 4G...

Advertisement
1/5
ಡಿಸ್‌ಪ್ಲೇ ವಿನ್ಯಾಸ
ಡಿಸ್‌ಪ್ಲೇ ವಿನ್ಯಾಸ

iQOO Z6 Lite 5G ಸ್ಮಾರ್ಟ್‌ಫೋನ್‌ 6.58 ಇಂಚಿನ LCD ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದರ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 401 PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಸಹ ಹೊಂದಿದೆ.

2/5
ಪ್ರೊಸೆಸರ್‌ ಸಾಮರ್ಥ್ಯ
ಪ್ರೊಸೆಸರ್‌ ಸಾಮರ್ಥ್ಯ

iQOO Z6 Lite 5G ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 4 ಜೆನ್‌ 1 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್‌ ಹೊಂದಿದೆ. ಮೆಮೊರಿ ಕಾರ್ಡ್‌ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

3/5
ಡ್ಯುಯಲ್ ಕ್ಯಾಮೆರಾ
ಡ್ಯುಯಲ್ ಕ್ಯಾಮೆರಾ

iQOO Z6 Lite 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಹೊಂದಿದೆ. ಜೊತೆಗೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಬೇಸಿಕ್ ಎಡಿಟಿಂಗ್ ಆಯ್ಕೆಗಳಿವೆ.

4/5
5000 mAh ಬ್ಯಾಟರಿ  
5000 mAh ಬ್ಯಾಟರಿ  

iQOO Z6 Lite 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 18W ವೇಗದ ಚಾರ್ಜಿಂಗ್‌ ಸೌಲಭ್ಯವಿದೆ. ಕನೆಕ್ಟಿವಿಟಿ ಸೌಲಭ್ಯಗಳ ಪೈಕಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, 5G ನೆಟ್‌ವರ್ಕ್‌ ಸಪೋರ್ಟ್ ಮಾಡುತ್ತದೆ. ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೊಮೀಟರ್ ಸೆನ್ಸಾರ್‌ ಸಹ ಹೊಂದಿದೆ.

5/5
ಗ್ರೀನ್‌ & ಬ್ಲ್ಯಾಕ್‌ ಕಲರ್‌
ಗ್ರೀನ್‌ & ಬ್ಲ್ಯಾಕ್‌ ಕಲರ್‌

ದೇಶಿಯ ಮಾರುಕಟ್ಟೆಯಲ್ಲಿ iQOO Z6 Lite 5G ಸ್ಮಾರ್ಟ್‌ಫೋನ್ 4GB + 64GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ ಗ್ರೀನ್‌ ಹಾಗೂ ಬ್ಲ್ಯಾಕ್‌ ಕಲರ್‌ನಲ್ಲಿ ಖರೀದಿಗೆ ಲಭ್ಯವಿದೆ.  





Read More