PHOTOS

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಚಾಲನೆ

ಮಾತುಗಳನ್ನು ಕೇಳಬೇಡಿ.ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಸಿ...

Advertisement
1/5

ಎರಡನೇ ಹಂತ ಕೂಡ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳಿಗೆ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನೆಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಹೇಳಿದರು.

2/5

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಎಂಬ ಸೂಚನೆಯನ್ನು ಇದೇ ವೇಳೆ ನೀಡುತ್ತಿದ್ದೇನೆ‌ ಎಂದರು.

3/5

2014ರಲ್ಲಿ ಎತ್ತಿನಹೊಳೆಗೆ ಭೂಮಿಪೂಜೆ ನೇರವೇರಿಸಿದವನು ನಾನೇ. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ.ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀನಿ.ಕೆರೆಗಳನ್ನು ತುಂಬಿಸಿಯೇ ತುಂಬಿಸ್ತೇನೆ. ಇದು ಶತಸಿದ್ಧ ಎಂದು ಅವರು ಭರವಸೆ ನೀಡಿದರು.

4/5

ಹೀಗಿದ್ದರೂ ಕೆಲವರು ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಮೂರ್ಖರನ್ನಾಗಿ ಮಾಡಲು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಅವರು ಮನವಿ ಮಾಡಿದರು.

5/5

ಎತ್ತಿನಹೊಳೆ ಎರಡನೇ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ. ಇದು ಎರಡು ಹಂತದ ಯೋಜನೆ. ಮೊದಲ ಹಂತ ಇಂದು ಉದ್ಘಾಟನೆಯಾಗಿದೆ.





Read More