PHOTOS

ವಿಶ್ವಕಪ್‌: ಈ ವಿಷಯದಲ್ಲಿ ವಿರಾಟ್ ಕೊಹ್ಲಿಗಿಂತ ಮುಂದಿದ್ದಾರೆ ಪಾಕಿಸ್ತಾನದ ಅದ್ಭುತ ಬ್ಯಾಟ್ಸ್‌ಮನ್‌

World Cup: ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ  ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ  ಪಾಕಿಸ್ತಾನದ ಅದ್ಭುತ ಬ್ಯಾಟ್ಸ್‌ಮನ್‌ ಮೊಹಮ್ಮದ್ ರಿ...

Advertisement
1/8
ವಿರಾಟ್ ಕೊಹ್ಲಿಗಿಂತ ಮುಂದಿದ್ದಾರೆ ಪಾಕಿಸ್ತಾನದ ಅದ್ಭುತ ಬ್ಯಾಟ್ಸ್‌ಮನ್‌
 ವಿರಾಟ್ ಕೊಹ್ಲಿಗಿಂತ ಮುಂದಿದ್ದಾರೆ ಪಾಕಿಸ್ತಾನದ ಅದ್ಭುತ ಬ್ಯಾಟ್ಸ್‌ಮನ್‌

ನಿನ್ನೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಭರ್ಜರಿ 7 ವಿಕೆಟ್‌ಗಳಿಂದ  ಮಣಿಸಿದ ಪಾಕಿಸ್ತಾನ  ಇನ್ನೂ ಸೆಮಿಫೈನಲ್‌ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಏತನ್ಮಧ್ಯೆ, ಪಾಕಿಸ್ತಾನದ ಅದ್ಭುತ ಬ್ಯಾಟ್ಸ್‌ಮನ್ ಒಂದು ವಿಷಯದಲ್ಲಿ ಭಾರತದ ದಂತಕಥೆ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ. 

2/8
ಮೊಹಮ್ಮದ್ ರಿಜ್ವಾನ್
ಮೊಹಮ್ಮದ್ ರಿಜ್ವಾನ್

ಬಾಂಗ್ಲಾದೇಶ ವಿರುದ್ಧದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 21 ಎಸೆತಗಳಲ್ಲಿ 26 ರನ್ ಗಳಿಸಿ ಔಟಾಗದೆ ಉಳಿದರು. ಈ ವೇಳೆ ಅವರು 4 ಬೌಂಡರಿಗಳನ್ನು ಬಾರಿಸಿದರು. ಈ ಪಂದ್ಯದಲ್ಲಿ ರಿಜ್ವಾನ್ ಗೆಲುವಿನ ರೂವಾರಿ ಆದರು. ಅಷ್ಟೇ ಅಲ್ಲ, ಮೊಹಮ್ಮದ್ ರಿಜ್ವಾನ್ ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಮತ್ತು ಭಾರತದ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿ ವಿಶ್ವಕಪ್‌ನಲ್ಲಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟಾಪ್ 5 ರಲ್ಲಿ ಸ್ಥಾನ ಪಡೆದರು . 

3/8
ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್: 7 ಇನ್ನಿಂಗ್ಸ್‌ಗಳಲ್ಲಿ 359 ರನ್
ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್: 7 ಇನ್ನಿಂಗ್ಸ್‌ಗಳಲ್ಲಿ 359 ರನ್

ಪಾಕಿಸ್ತಾನ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಆಗಿರುವ ಮೊಹಮ್ಮದ್ ರಿಜ್ವಾನ್ ವಿಶ್ವಕಪ್‌ನಲ್ಲಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟಾಪ್-5 ರೊಳಗೆ ಪ್ರವೇಶಿಸಿದ್ದಾರೆ.: 7 ಇನ್ನಿಂಗ್ಸ್‌ಗಳಲ್ಲಿ 359 ರನ್ ಗಳಿಸಿರುವ ಇವರು ಪ್ರಸ್ತುತ ವಿಶ್ವಕಪ್ 2023 ಟಾಪ್ ರನ್ ಸ್ಕೋರರ್ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ರಿಜ್ವಾನ್ ಇಲ್ಲಿಯವರೆಗೆ 1 ಶತಕ ಮತ್ತು 1 ಅರ್ಧಶತಕ ಗಳಿಸಿದ್ದಾರೆ. 

4/8
ಏಳನೇ ಸ್ಥಾನಕ್ಕೆ ಕುಸಿದ ವಿರಾಟ್
ಏಳನೇ ಸ್ಥಾನಕ್ಕೆ ಕುಸಿದ ವಿರಾಟ್

2023ರ ವಿಶ್ವಕಪ್‌ನಲ್ಲಿ 6 ಇನ್ನಿಂಗ್ಸ್‌ಗಳಲ್ಲಿ 354 ರನ್ ಕಲೆಹಾಕಿರುವ ಭಾರತದ ರನ್ ಮೆಷನ್ ಖ್ಯಾತಿಯ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಬಾರಿಯ ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 1 ಶತಕ ಮತ್ತು 3 ಅರ್ಧ ಶತಕಗಳ ಸಹಾಯದಿಂದ ಒಟ್ಟು 354 ರನ್ ಕಲೆಹಾಕಿದ್ದಾರೆ.  

5/8
ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಟಾಪರ್
ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿ ಕಾಕ್ ಟಾಪರ್

2023ರ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಗಳಿಸಿದ ಅಗ್ರ ಹತ್ತು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಅಗ್ರಸ್ಥಾನದಲ್ಲಿದ್ದಾರೆ. ಈ ವಿಶ್ವಕಪ್‌ನಲ್ಲಿ ಮೂರು ಶತಕಗಳನ್ನು ಬಾರಿಸಿರುವ ಕ್ವಿಂಟನ್ ಡಿ ಕಾಕ್ 6 ಪಂದ್ಯಗಳಲ್ಲಿ   431 ರನ್ ಗಳಿಸಿದ್ದಾರೆ. 

6/8
ಎರಡನೇ ಸ್ಥಾನದಲ್ಲಿದ್ದಾರೆ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್
ಎರಡನೇ ಸ್ಥಾನದಲ್ಲಿದ್ದಾರೆ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್

ಆಸ್ಟ್ರೇಲಿಯದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.  ವಿಶ್ವಕಪ್‌ನಲ್ಲಿ 6 ಪಂದ್ಯಗಳಲ್ಲಿ 2 ಶತಕ ಮತ್ತು 1 ಅರ್ಧಶತಕದ ಸಹಾಯದಿಂದ ಡೇವಿಡ್ ವಾರ್ನರ್  ಇದುವರೆಗೂ ಒಟ್ಟು 413 ರನ್ ಗಳಿಸಿದ್ದಾರೆ. 

7/8
ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ರಚಿನ್ ರವೀಂದ್ರ
ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ರಚಿನ್ ರವೀಂದ್ರ

ನ್ಯೂಜಿಲೆಂಡ್‌ನ ಈ ಯುವ ಆಲ್‌ರೌಂಡರ್ ರಚಿನ್ ರವೀಂದ್ರ 2 ಶತಕ ಮತ್ತು ಒಂದು ಅರ್ಧ ಶತಕಗಳನ್ನು ಗಳಿಸುವ ಮೂಲಕ 2023ರ ವಿಶ್ವಕಪ್ ಪಂದ್ಯದಲ್ಲಿ ಇದುವರೆಗೂ 406 ರನ್ ಕಲೆಹಾಕಿದ್ದು,  ಗರಿಷ್ಠ ರನ್ ಗಳಿಸಿದ ಅಗ್ರ ಹತ್ತು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 

8/8
ನಾಲ್ಕನೇ ಸ್ಥಾನದಲ್ಲಿ ಭಾರತದ ಹಿಟ್ ಮ್ಯಾನ್
ನಾಲ್ಕನೇ ಸ್ಥಾನದಲ್ಲಿ ಭಾರತದ ಹಿಟ್ ಮ್ಯಾನ್

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದುವರೆಗೆ ವಿಶ್ವಕಪ್‌ನ 6 ಪಂದ್ಯಗಳಲ್ಲಿ 1 ಶತಕ ಮತ್ತು 2 ಅರ್ಧ ಶತಕಗಳ ಸಹಾಯದಿಂದ 398 ರನ್ ಗಳಿಸಿದ್ದಾರೆ. ಲಕ್ನೋದಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯುತ್ತಮ ಇನ್ನಿಂಗ್ಸ್ ಆಡಿದ ಬಳಿಕ ಭಾರತದ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ 4 ನೇ ಸ್ಥಾನಕ್ಕೇರಿದರು. 





Read More