PHOTOS

Raisin Water: ನಿತ್ಯ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರು ಕುಡಿದರೆ ಈ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ

Raisin Water Benefits: ಒಣದ್ರಾಕ್ಷಿ ಸೇವನೆಯು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ಒದಗಿಸುತ್ತದೆ. ಅದರಲ್ಲೂ ರಾತ್ರಿಯಿಡೀ  ಒಣದ್ರಾಕ್ಷಿಯನ್ನು ನೀರಿನಲ್ಲಿ...

Advertisement
1/8
ಒಣದ್ರಾಕ್ಷಿ ನೀರು
ಒಣದ್ರಾಕ್ಷಿ ನೀರು

ಜೀವಸತ್ವಗಳು, ಆಹಾರದ ಫೈಬರ್ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಲ್ಲಿ ಹೇರಳವಾಗಿರುವ ಒಣದ್ರಾಕ್ಷಿಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರು ಕುಡಿಯುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳು ಹತ್ತಿರವೂ ಸುಳಿಯುವುದಿಲ್ಲ ಎಂದು ಹೇಳಲಾಗುತ್ತದೆ. 

2/8
ದೇಹವನ್ನು ನಿರ್ವಿಷಗೊಳಿಸುವಿಕೆ
ದೇಹವನ್ನು ನಿರ್ವಿಷಗೊಳಿಸುವಿಕೆ

ನಿತ್ಯ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಇದು ದೇಹವನ್ನು ನಿರ್ವಿಷಗೊಳಿಸಲು ತುಂಬಾ ಪ್ರಯೋಜನಕಾರಿ ಆಗಿದೆ. 

3/8
ಉತ್ತಮ ಜೀರ್ಣಕ್ರಿಯೆ
ಉತ್ತಮ ಜೀರ್ಣಕ್ರಿಯೆ

ಒಣದ್ರಾಕ್ಷಿ ನೀರಿನಲ್ಲಿ ಬಹಳಷ್ಟು ಫೈಬರ್ ಕಂಡುಬರುತ್ತದೆ. ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. 

4/8
ಗ್ಯಾಸ್ಟ್ರಿಕ್
ಗ್ಯಾಸ್ಟ್ರಿಕ್

ಒಣದ್ರಾಕ್ಷಿ ನೀರಿನಲ್ಲಿ ಆಂಟಾಸಿಡ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಕಂಡುಬರುತ್ತದೆ. ಹಾಗಾಗಿ ನಿತ್ಯ ಮುಂಜಾನೆ ಒಣದ್ರಾಕ್ಷಿ ನೀರು ಕುಡಿಯುವುದರಿಂದ ಅಸಿಡಿಟಿ, ಗ್ಯಾಸ್ಟ್ರಿಕ್ ಸಮಸ್ಯೆಗಳಿಂದ ದೂರ ಉಳಿಯಬಹುದು ಎನ್ನಲಾಗುತ್ತದೆ. 

5/8
ಯಕೃತ್ತಿನ ಸಮಸ್ಯೆ
ಯಕೃತ್ತಿನ ಸಮಸ್ಯೆ

ರಾತ್ರಿ ಒಣದ್ರಾಕ್ಷಿಯನ್ನು ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಆ ನೀರನ್ನು ಕುಡಿಯುವುದರಿಂದ ಯಕೃತ್ತಿನ ಹಲವು ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. 

6/8
ರಕ್ತದ ಕೊರತೆಯಿಂದ ಪರಿಹಾರ
ರಕ್ತದ ಕೊರತೆಯಿಂದ ಪರಿಹಾರ

ಒಣದ್ರಾಕ್ಷಿಯಲ್ಲಿ ಕಬ್ಬಿಣ, ಬಿ-ಕಾಂಪ್ಲೆಕ್ಸ್ ಜೀವಸತ್ವಗಳು ಮತ್ತು ತಾಮ್ರವು ಹೇರಳವಾಗಿ ಕಂಡುಬರುತ್ತದೆ.  ಹಾಗಾಗಿ, ನಿತ್ಯ ಮುಂಜಾನೆ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಇದು ದೇಹದಲ್ಲಿ ರಕ್ತದ ಕೊರತೆಯನ್ನು ನೀಗಿಸುತ್ತದೆ. 

7/8
ಒಣದ್ರಾಕ್ಷಿ ನೀರಿನ ಇತರ ಪ್ರಯೋಜನಗಳು
ಒಣದ್ರಾಕ್ಷಿ ನೀರಿನ ಇತರ ಪ್ರಯೋಜನಗಳು

ನಿತ್ಯ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ನೆನೆಸಿಟ್ಟ ನೀರನ್ನು ಕುಡಿಯುವುದರಿಂದ ಇದು ಆರೋಗ್ಯಕರ ತೂಕ ಇಳಿಕೆಯ ಜೊತೆಗೆ ಮೊಡವೆಯಂತಹ ಚರ್ಮ ಸಂಬಂಧಿತ ಸಮಸ್ಯೆಗಳಿಂದಲೂ ಪರಿಹಾರ ಪಡೆಯಬಹುದು. 

8/8
ಸೂಚನೆ
ಸೂಚನೆ

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.  





Read More