Home> Sports
Advertisement

Virat Kohli: ಪತಿಯ ಸಾಧನೆಗೆ ಪತ್ನಿಯ ಮೆಚ್ಚುಗೆ: ಶತಕ ವೀರ ಕೊಹ್ಲಿಯ ಪೋಸ್ಟ್ ಹಾಕಿ ರೊಮ್ಯಾಂಟಿಕ್ ವಿಶ್ ಮಾಡಿದ ಅನುಷ್ಕಾ

Anushka Sharam On Virat Kohli Century: ಅನುಷ್ಕಾ ಶರ್ಮಾ ಸೋಶಿಯಲ್ ಮೀಡಿಯಾ ಇನ್ ಸ್ಟಾಗ್ರಾಂನಲ್ಲಿ ವಿರಾಟ್ ಕೊಹ್ಲಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ವಿರಾಟ್ ಬ್ಯಾಟ್ ಎತ್ತಿಹಿಡಿದು ತಮ್ಮ ಶತಕವನ್ನು ಆಚರಿಸುತ್ತಿದ್ದಾರೆ. ಈ ಬಗ್ಗೆ ಅನುಷ್ಕಾ ಶರ್ಮಾ, “ವಾಟ್ ಎ ಮ್ಯಾನ್” ಎಂದು ಬರೆದುಕೊಂಡಿದ್ದಾರೆ. “ಎಂತಹ ಇನ್ನಿಂಗ್ಸ್ ಆಡಿದ್ದೀರಿ. ಸೂಪರ್” ಎಂದು ಮೆಚ್ಚುಗೆ ಸೂಚಿಸಿದ್ದಾರೆ.

Virat Kohli: ಪತಿಯ ಸಾಧನೆಗೆ ಪತ್ನಿಯ ಮೆಚ್ಚುಗೆ: ಶತಕ ವೀರ ಕೊಹ್ಲಿಯ ಪೋಸ್ಟ್ ಹಾಕಿ ರೊಮ್ಯಾಂಟಿಕ್ ವಿಶ್ ಮಾಡಿದ ಅನುಷ್ಕಾ

Anushka Sharam On Virat Kohli Century: ಶ್ರೀಲಂಕಾ ವಿರುದ್ಧ ವಿರಾಟ್ ಕೊಹ್ಲಿ ಬಿರುಸಿನ ಇನ್ನಿಂಗ್ಸ್ ಆಡಿದ್ದು, 166 ರನ್ ಗಳಿಸುವ ಮೂಲಕ ಟೀಂ ಇಂಡಿಯಾವನ್ನು ತ್ವರಿತವಾಗಿ ಗೆಲ್ಲುವಂತೆ ಮಾಡಿದರು. ಈ ಮೂಲಕ ಅನೇಕ ದಿಗ್ಗಜರ ದಾಖಲೆಗಳನ್ನು ಕೊಹ್ಲಿ ಮುರಿದಿದ್ದಾರೆ. ಇದು ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ಅವರ 46ನೇ ಶತಕವಾಗಿದೆ. ಕೊಹ್ಲಿಯಿಂದಾಗಿ ಭಾರತ ಏಕದಿನ ಕ್ರಿಕೆಟ್‌ನಲ್ಲಿ ರನ್‌ಗಳ ವಿಷಯದಲ್ಲಿ ದೊಡ್ಡ ಗೆಲುವು ದಾಖಲಿಸಿದೆ. ಇದೀಗ ವಿರಾಟ್ ಕೊಹ್ಲಿ ಶತಕದ ಬಗ್ಗೆ ಪತ್ನಿ ಅನುಷ್ಕಾ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: U19 T20 World Cup: 12 ಓವರ್, 25 ರನ್… ಟೀಂ ಆಲೌಟ್: ಟಿ20 ಕ್ರಿಕೆಟ್ ನಲ್ಲಿ ಹಿಂದೆಂದೂ ಸಂಭವಿಸಿಲ್ಲ ಇಂತಹ ಕಳಪೆ ಪ್ರದರ್ಶನ

ಅನುಷ್ಕಾ ಶರ್ಮಾ ಸೋಶಿಯಲ್ ಮೀಡಿಯಾ ಇನ್ ಸ್ಟಾಗ್ರಾಂನಲ್ಲಿ ವಿರಾಟ್ ಕೊಹ್ಲಿಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ವಿರಾಟ್ ಬ್ಯಾಟ್ ಎತ್ತಿಹಿಡಿದು ತಮ್ಮ ಶತಕವನ್ನು ಆಚರಿಸುತ್ತಿದ್ದಾರೆ. ಈ ಬಗ್ಗೆ ಅನುಷ್ಕಾ ಶರ್ಮಾ, “ವಾಟ್ ಎ ಮ್ಯಾನ್” ಎಂದು ಬರೆದುಕೊಂಡಿದ್ದಾರೆ. “ಎಂತಹ ಇನ್ನಿಂಗ್ಸ್ ಆಡಿದ್ದೀರಿ. ಸೂಪರ್” ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ದಾಂಪತ್ಯ ಜೀವನಕ್ಕೆ 2017 ರಲ್ಲಿ ಕಾಲಿಟ್ಟಿದ್ದರು. ಈ ಜೋಡಿಗೆ ವಾಮಿಕಾ ಎಂಬ ಮಗಳಿದ್ದಾಳೆ. ಅನುಷ್ಕಾ ಸಾಮಾಜಿಕ ಮಾಧ್ಯಮದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಮತ್ತು ಅವರು ಹಂಚಿಕೊಂಡ ಫೋಟೋಗಳನ್ನು ಅಭಿಮಾನಿಗಳು ಇಷ್ಟಪಡುತ್ತಾರೆ.

ಭಾರತ ತಂಡದ ಸೂಪರ್ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ತಮ್ಮ ಹಳೆಯ ಫಾರ್ಮ್ ಗೆ ಮರಳಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ODI ನಲ್ಲಿ 113 ರನ್ ಮತ್ತು ಮೂರನೇ ODI ನಲ್ಲಿ 166 ರನ್ ಬಾರಿಸಿ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದ್ದಾರೆ. ಅವರಿಂದಲೇ ಟೀಂ ಇಂಡಿಯಾ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: Virat Kohli: ಕೊಹ್ಲಿ ಶತಕ ಬಾರಿಸುತ್ತಿದ್ದಂತೆ ಪಾಕಿಸ್ತಾನದಲ್ಲಿ ಸಂಭ್ರಮಾಚರಣೆ! ‘ವಿರಾಟ್ ದಿ ಬಾಸ್’ ಎಂದ ಪಾಕ್ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 390 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಭಾರತದಿಂದ ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಬಿರುಸಿನ ಇನ್ನಿಂಗ್ಸ್ ಆಡಿದರು. ಇದಾದ ಬಳಿಕ ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ ಪಡೆದರು. ಭಾರತದ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿದ್ದು, ಇಡೀ ಶ್ರೀಲಂಕಾ ತಂಡವು 73 ರನ್‌ಗಳಿಗೆ ಆಲೌಟ್ ಆಗಿತ್ತು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More