Home> Sports
Advertisement

Team India: ತವರಿನ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ: ವಿಶ್ವಕಪ್ ಬಳಿಕ ಈ 3 ಟೂರ್ನಿಗಳನ್ನಾಡಲಿದೆ ಟೀಂ ಇಂಡಿಯಾ

Team India International Home season 2024-25: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024-25ರ ಟೀಮ್ ಇಂಡಿಯಾದ (ಹಿರಿಯ ಪುರುಷರು) ಅಂತರಾಷ್ಟ್ರೀಯ ದೇಶೀಯ ಋತುವಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ.

Team India: ತವರಿನ ಪಂದ್ಯಗಳ ವೇಳಾಪಟ್ಟಿ ಬಿಡುಗಡೆ: ವಿಶ್ವಕಪ್ ಬಳಿಕ ಈ 3 ಟೂರ್ನಿಗಳನ್ನಾಡಲಿದೆ ಟೀಂ ಇಂಡಿಯಾ

Team India International Home season 2024-25: ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ ತಂಡ ಪ್ರಸ್ತುತ T20 ವಿಶ್ವಕಪ್ ಆಡುತ್ತಿದೆ. ‘ಎ’ ಗುಂಪಿನ ಎಲ್ಲ ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಸೂಪರ್-8ರಲ್ಲಿ ಸ್ಥಾನ ಪಡೆದಿದ್ದು, ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾ ತಂಡಗಳನ್ನು ಎದುರಿಸಲಿದೆ.

ಇದನ್ನೂ ಓದಿ: ಕರ್ನಾಟಕ ಮೂಲದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಆತ್ಮಹತ್ಯೆ! ಖಿನ್ನತೆಗೆ ತುತ್ತಾಗಿದ್ದ ವೇಗಿಯ ದುರಂತ ಅಂತ್ಯ

ಈ ಪಂದ್ಯಾವಳಿಯ ನಡುವೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024-25ರ ಟೀಮ್ ಇಂಡಿಯಾದ (ಹಿರಿಯ ಪುರುಷರು) ಅಂತರಾಷ್ಟ್ರೀಯ ದೇಶೀಯ ಋತುವಿನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್‌’ನಲ್ಲಿ ಬಾಂಗ್ಲಾದೇಶ ವಿರುದ್ಧದ ಸ್ವದೇಶಿ ಸರಣಿಯೊಂದಿಗೆ ತಂಡವು ಈ ಋತುವನ್ನು ಪ್ರಾರಂಭಿಸಲಿದೆ.

ಸೆಪ್ಟೆಂಬರ್‌’ನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಪಂದ್ಯಗಳ ಐಡಿಎಫ್‌’ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯೊಂದಿಗೆ ಅಂತರರಾಷ್ಟ್ರೀಯ ದೇಶೀಯ ಋತುವು ಪ್ರಾರಂಭವಾಗುತ್ತದೆ. ಇದರ ನಂತರ ಮೂರು ಟಿ20 ಪಂದ್ಯ ನಡೆಯಲಿದೆ. ಸೆಪ್ಟೆಂಬರ್ 19 ರಿಂದ ಮೊದಲ ಟೆಸ್ಟ್‌’ಗೆ ಚೆನ್ನೈ ಆತಿಥ್ಯ ವಹಿಸಲಿದ್ದು, ಸೆಪ್ಟೆಂಬರ್ 27 ರಿಂದ ಕಾನ್ಪುರ ಎರಡನೇ ಟೆಸ್ಟ್‌’ಗೆ ಆತಿಥ್ಯ ವಹಿಸಲಿದೆ. ಇದಾದ ಬಳಿಕ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ಧರ್ಮಶಾಲಾ, ದೆಹಲಿ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿವೆ.

ಇದರ ನಂತರ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು, ಮೊದಲ ಟೆಸ್ಟ್ ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ಆರಂಭವಾಗಲಿದೆ. ಪುಣೆ ಮತ್ತು ಮುಂಬೈ ಕ್ರಮವಾಗಿ ಎರಡು ಮತ್ತು ಮೂರನೇ ಟೆಸ್ಟ್ ಆತಿಥ್ಯ ವಹಿಸಲಿವೆ.

ಇದನ್ನೂ ಓದಿ:  ರೋಹಿತ್ ಶರ್ಮಾ ಬಳಿಕ ಟೀಂ ಇಂಡಿಯಾದ ಮುಂದಿನ ನಾಯಕ ಯಾರು? ಈ 3 ಆಟಗಾರರ ನಡುವೆ ಇದೆ ಭಾರೀ ಪೈಪೋಟಿ

ಹೊಸ ವರ್ಷದ ಆಗಮನದೊಂದಿಗೆ, ರೋಚಕ ಸೀಮಿತ ಓವರ್‌’ಗಳ ಸರಣಿಯನ್ನು ಶುರುವಾಗಲಿದೆ. ಇದರಲ್ಲಿ ಇಂಗ್ಲೆಂಡ್ ತಂಡ ಐದು ಟಿ 20 ಅಂತರರಾಷ್ಟ್ರೀಯ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More