Home> Sports
Advertisement

Ind vs Aus 1st ODI: ವಿರಾಟ್ ಬದಲಿಗೆ 3ನೇ ಸ್ಥಾನದಲ್ಲಿ ಆಡಲಿದ್ದಾರೆ ಈ ವಿಧ್ವಂಸಕ ಬ್ಯಾಟ್ಸ್‌ಮನ್

Ind vs Aus 1st ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿಯ ಮೊದಲ ಏಕದಿನ ಪಂದ್ಯ ಇಂದು ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಭಾರತದ ಮತ್ತೊಬ್ಬ ಪ್ರಬಲ ಆಟಗಾರ ನಂಬರ್-3 ರಲ್ಲಿ ಪ್ರವೇಶಿಸಲಿದ್ದಾರೆ.  

Ind vs Aus 1st ODI: ವಿರಾಟ್ ಬದಲಿಗೆ 3ನೇ ಸ್ಥಾನದಲ್ಲಿ ಆಡಲಿದ್ದಾರೆ ಈ ವಿಧ್ವಂಸಕ ಬ್ಯಾಟ್ಸ್‌ಮನ್

Ind vs Aus 1st ODI: ಅಕ್ಟೋಬರ್ 05, 2023ರಿಂದ ಆರಂಭವಾಗಲಿರುವ ವಿಶ್ವಕಪ್‌ಗೆ ಟೀಂ ಇಂಡಿಯಾ ಅಂತಿಮ ಸಿದ್ಧತೆ ಜೋರಾಗಿದೆ. ಇಂದಿನಿಂದ ಭಾರತ-ಆಸ್ಟ್ರೇಲಿಯಾ ಏಕದಿನ ಫೈಟ್ ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಹಣಾಹಣಿಗೆ ವೇದಿಕೆ ಸಿದ್ದವಾಗಿದ್ದು ಮೊಹಾಲಿಯ ಪಿಸಿಎ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರರಾಗಿ ಕಾಯುತ್ತಿದ್ದಾರೆ. ಆದರೆ, ಈ ಪಂದ್ಯದಲ್ಲಿ ಪವರ್‌ಫುಲ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಆಡುವುದಿಲ್ಲ. ಇವರ ಬದಲಿಗೆ ಮೂರನೇ  ಸ್ಥಾನದಲ್ಲಿ ಟೀಮ್ ಇಂಡಿಯಾದ ಮತ್ತೊಬ್ಬ ವಿಧ್ವಂಸಕ ಬ್ಯಾಟ್ಸ್‌ಮನ್ ಬ್ಯಾಟಿಂಗ್ ಗೆ ಇಳಿಯಲಿದ್ದು ಇವರನ್ನು ಕಂಡರೆ ಬೌಲರ್‌ಗಳು ನಡುಗುತ್ತಾರೆ ಎನ್ನಲಾಗುತ್ತಿದೆ. 

ಭಾರತದ ಆತಿಥ್ಯದಲ್ಲಿ ಅಕ್ಟೋಬರ್ 05, 2023ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್‌ಗೂ ಮೊದಲು ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ವಿಶ್ವಕಪ್‌ಗೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯ ಬಹಳ ಮಹತ್ವದ್ದಾಗಿದೆ. ಸರಣಿಯ ಮೊದಲೆರಡು ಪಂದ್ಯಗಳಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕುಲದೀಪ್ ಯಾದವ್ ಅವರಂತಹ ಟಾಪ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಈ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಬದಲಿಗೆ ಕನ್ನಡಿಗ ಕೆ.ಎಲ್. ರಾಹುಲ್ ಟೀಮ್ ಇಂಡಿಯಾದ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. 

ಇದನ್ನೂ ಓದಿ- ಭಾರತ vs ಆಸ್ಟ್ರೇಲಿಯಾ ಏಕದಿನ ಹಣಾಹಣಿಯಲ್ಲಿ ಇದುವರೆಗೆ ಹೆಚ್ಚು ಪಂದ್ಯ ಗೆದ್ದ ತಂಡ ಯಾವುದು ಗೊತ್ತಾ?

ಈ ಆಟಗಾರನಿಗೆ ಓಪನಿಂಗ್ ಜವಾಬ್ದಾರಿ: 
ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿರುವ ಹಿನ್ನಲೆಯಲ್ಲಿ ಅವರ ಬದಲಿಗೆ ಶುಭನಮ್ ಗಿಲ್ ಜೊತೆಗೆ ಇಶಾನ್ ಕಿಶನ್ ಓಪನಿಂಗ್ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆ.ಎಲ್. ರಾಹುಲ್ 4ನೇ ಕ್ರಮಾಂಕದಲ್ಲಿ ಆಡುತ್ತಿದ್ದು, ಶ್ರೇಯಸ್ ಅಯ್ಯರ್ ಫಿಟ್ ಆಗಿದ್ದರೆ ಅವರು ನಾಲ್ಕನೇ ಸ್ಥಾನದಲ್ಲಿ ಆಡಲಿದ್ದು, ರಾಹುಲ್ 5ನೇ ಸ್ಥಾನದಲ್ಲಿ ಆಡಬೇಕಾಗುತ್ತದೆ. 

ಮೂರನೇ ಸ್ಥಾನದಲ್ಲಿ ಆಡಲಿದ್ದಾರೆ ಈ ಪ್ರಬಲ ಆಟಗಾರ: 
ಇನ್ನೂ ವಿರಾಟ್ ಕೊಹ್ಲಿ ಅವರ ಬದಲಿಗೆ ಮೂರನೇ ಸ್ಥಾನದಲ್ಲಿ ಸೂರ್ಯಾಕುಮಾರ್ ಮತ್ತು ಇತ್ತೀಚೆಗಷ್ಟೇ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ ತಿಲಕ್ ವರ್ಮಾ ನಡುವೆ ಭಾರೀ ಪೈಪೋಟಿ ಇದೆ. ಆದಾಗ್ಯೂ, ಕದಿನ ವಿಶ್ವಕಪ್‌ನ ಭಾಗವಾಗಿರುವ ಸೂರ್ಯಾಕುಮಾರ್ ಯಾದವ್ ಅವರಿಗೆ ಮೂರನೇ ಕ್ರಮಾಂಕದಲ್ಲಿ ಆಡಲು ಅವಕಾಶ ನೀಡುವ ಅವಕಾಶಗಳು ಹೆಚ್ಚಿವೆ. 33 ವರ್ಷದ ಈ ಆಟಗಾರ ಇದುವರೆಗೆ 27 ಏಕದಿನ ಪಂದ್ಯಗಳನ್ನು ಆಡಿದ್ದು, 2 ಅರ್ಧಶತಕಗಳ ಸಹಾಯದಿಂದ ಒಟ್ಟು 537 ರನ್ ಗಳಿಸಿದ್ದಾರೆ. 

ಇದನ್ನೂ ಓದಿ- ಫಿಟ್ನೆಸ್ ಟೆಸ್ಟ್ ಫೇಲ್: ವಿಶ್ವಕಪ್ ತಂಡದಿಂದ ಹೊರಬಿದ್ದ ಇಬ್ಬರು ಸ್ಟಾರ್ ಪ್ಲೇಯರ್ಸ್! ಬದಲಿಯಾಗಿ ಈ ಆಟಗಾರರಿಗೆ ಸ್ಥಾನ

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ವಿಶ್ರಾಂತಿ ಹಿಂದಿನ ನಿಜವಾದ ಕಾರಣ ಬಿಚ್ಚಿಟ್ಟ ರಾಹುಲ್ ದ್ರಾವಿಡ್: 
ವಿಶ್ವಕಪ್‌ಗೆ ಆದ್ಯತೆ ನೀಡುವ ಗುರಿಯನ್ನು ಹೊಂದಿರುವ ಕಾರ್ಯತಂತ್ರದ ಕ್ರಮದಲ್ಲಿ, "ತಂಡವು ವಿಶ್ವಕಪ್‌ಗಾಗಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ದೈಹಿಕವಾಗಿ ಮತ್ತು ಮಾನಸಿಕವಾಗಿ ತಾಜಾತನವನ್ನು ಬಯಸುತ್ತದೆ.  ಆದ್ದರಿಂದ ಅವರಿಗೆ ಮೊದಲ ಎರಡು ಏಕದಿನ ಪಂದ್ಯಗಳಿಗೆ ವಿಶ್ರಾಂತಿ ನೀಡಲಾಗಿದೆ" ಎಂದು  ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ದೃಢಪಡಿಸಿದರು. ಈ ನಿರ್ಧಾರವು ದೀರ್ಘಾವಧಿಯ ಯಶಸ್ಸಿಗೆ ಭಾರತದ ಬದ್ಧತೆಯನ್ನು ಒತ್ತಿಹೇಳುತ್ತದೆ ಮತ್ತು ಕಠಿಣ ಕ್ರಿಕೆಟ್ ಕ್ಯಾಲೆಂಡರ್‌ನ ಮುಖಾಂತರ ಅವರ ಸ್ಟಾರ್ ಆಟಗಾರರ ಯೋಗಕ್ಷೇಮವನ್ನು ಒತ್ತಿಹೇಳುತ್ತದೆ ಎಂದು ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದಾರೆ. 

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಪಂದ್ಯಗಳಿಗೆ ಭಾರತದ ಪ್ಲೇಯಿಂಗ್ XI ಈ ಕೆಳಕಂಡಂತಿದೆ: 
ಶುಭಮನ್ ಗಿಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ತಿಲಕ್ ವರ್ಮಾ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ., ಶಾರ್ದೂಲ್ ಠಾಕೂರ್, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ ಮತ್ತು ವಾಷಿಂಗ್ಟನ್ ಸುಂದರ್.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Read More