Home> Sports
Advertisement

IND vs WI: ವಿಂಡೀಸ್ ಏಕದಿನಕ್ಕೆ ಸಿದ್ಧವಾಯ್ತು Playing 11: ಒಬ್ಬರಲ್ಲ, ಇಬ್ಬರಲ್ಲ…Team Indiaದ ಈ 6 ಆಟಗಾರರು ಔಟ್!

IND vs WI 1st ODI: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಜೊತೆ ಶುಭಮನ್ ಗಿಲ್ ಓಪನಿಂಗ್ ಮಾಡಲಿದ್ದಾರೆ.

IND vs WI: ವಿಂಡೀಸ್ ಏಕದಿನಕ್ಕೆ ಸಿದ್ಧವಾಯ್ತು Playing 11: ಒಬ್ಬರಲ್ಲ, ಇಬ್ಬರಲ್ಲ…Team Indiaದ ಈ 6 ಆಟಗಾರರು ಔಟ್!

IND vs WI 1st ODI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯವು ಇಂದು ಸಂಜೆ 7 ರಿಂದ ಬ್ರಿಡ್ಜ್‌ ಟೌನ್ (ಬಾರ್ಬಡೋಸ್) ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ 6 ಆಟಗಾರರಿಗೆ ನಾಯಕ ರೋಹಿತ್ ಶರ್ಮಾ ಅವಕಾಶ ನೀಡುವುದು ಅನುಮಾನವಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್ ಇಲೆವೆನ್ ನಿಂದ ಯಾವ 6 ಆಟಗಾರರನ್ನು ಕೈಬಿಡುತ್ತಾರೆ ಎಂಬುದನ್ನು ನೋಡೋಣ.

ಇದನ್ನೂ ಓದಿ: “ಕೊಹ್ಲಿಯಿಂದಲೇ ಅಂತ್ಯ ಕಂಡಿತ್ತು ಜಹೀರ್ ಖಾನ್ ವೃತ್ತಿಜೀವನ”: ಈ ಅನುಭವಿ ಹೇಳಿಕೆಗೆ ಕ್ರಿಕೆಟ್ ಲೋಕದಲ್ಲಿ ತಲ್ಲಣ

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಜೊತೆ ಶುಭಮನ್ ಗಿಲ್ ಓಪನಿಂಗ್ ಮಾಡಲಿದ್ದಾರೆ. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಜೋಡಿ ಅತ್ಯಂತ ಅಪಾಯಕಾರಿ ಮತ್ತು ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಪವರ್-ಪ್ಲೇನಲ್ಲಿ ತೀವ್ರವಾಗಿ ರನ್ ಲೂಟಿ ಮಾಡುವಲ್ಲಿ ಪರಿಣತಿ ಹೊಂದಿದ್ದಾರೆ. ಅಷ್ಟೇ ಅಲ್ಲದೆ ಈ ಇಬ್ಬರೂ ಸಹ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ್ದಾರೆ. ಹೀಗಿರುವಾಗ ರುತುರಾಜ್ ಗಾಯಕ್ವಾಡ್ ತಂಡದಿಂದ ಹೊರಬೀಳುವ ಸಾಧ್ಯತೆ ಇದೆ.

ಇನ್ನೊಂದೆಡೆ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ಸಹ ಪ್ಲೇಯಿಂಗ್ XI ನಿಂದ ಹೊರಗಿಡಬಹುದು. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿರಾಟ್ ತಮ್ಮ ಫಾರ್ಮ್ ಗೆ ಮರಳಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 76 ಶತಕವನ್ನುನ್ನು ಬಾರಿಸಿದ್ದಾರೆ.

ಭಾರತ ತಂಡದ ನಿರ್ವಹಣಾ ಸಮಿತಿಯು ಸೂರ್ಯಕುಮಾರ್ ಯಾದವ್‌’ಗೆ ಹನ್ನೊಂದನೇ ಕ್ರಮಾಂಕದಲ್ಲಿ 4ನೇ ಬ್ಯಾಟ್ಸ್‌ಮನ್ ಆಗಿ ಅವಕಾಶ ನೀಡಬಹುದು. ಇಶಾನ್ ಕಿಶನ್‌’ಗೆ 5ನೇ ಕ್ರಮಾಂಕದ ಬ್ಯಾಟಿಂಗ್ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಅವಕಾಶ ಪಡೆಯಬಹುದು. ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ಇಶಾನ್ ಕಿಶನ್ ವಿಕೆಟ್ ಕೀಪಿಂಗ್ ಮಾಡಿದ್ದಾರೆ. ಇದೇ ಕಾರಣದಿಂದ ಅವರನ್ನು ಏಕದಿನದಲ್ಲೂ ಮುಂದುವರೆಸಲಿದ್ದಾರೆ.

ನಾಯಕ ರೋಹಿತ್ ಶರ್ಮಾ ಅವರು ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರನ್ನು ಪ್ಲೇಯಿಂಗ್ 11 ರಿಂದ ಕೈಬಿಡಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಉಪನಾಯಕ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಗಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ನಾಯಕ ರೋಹಿತ್ ಶರ್ಮಾ 7ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾಗೆ ಅವಕಾಶ ನೀಡಲಿದ್ದಾರೆ. ರವೀಂದ್ರ ಜಡೇಜಾ ಸ್ಪಿನ್ ಬೌಲಿಂಗ್ ಮೂಲಕ ಟೀಂ ಇಂಡಿಯಾವನ್ನು ಬ್ಯಾಟಿಂಗ್ ಮತ್ತು ಬೌಲಿಂಗ್’ನಲ್ಲಿ ಬಲಿಷ್ಠಗೊಳಿಸಲಿದ್ದಾರೆ.

ಇದನ್ನೂ ಓದಿ: ಮುಂದಿನ ಸರಣಿಗೆ ಪ್ಲೇಯಿಂಗ್ 11 ರೆಡಿ: 40ರ ಹರೆಯದ ಈ ಅನುಭವಿಗೆ ಕೊನೆಗೂ ಅವಕಾಶ ಕೊಟ್ಟ ಸಮಿತಿ

ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಸೇರ್ಪಡೆಯಾಗಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಮತ್ತು ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಅವರು ಎದುರಾಳಿಗಳಿಗೆ ಸಿಂಹಸ್ವಪ್ನವಾಗುವುದು ಗ್ಯಾರಂಟಿ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವೇಗದ ಬೌಲರ್‌ಗಳಾದ ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕತ್ ಮತ್ತು ಮುಖೇಶ್ ಕುಮಾರ್ ಅವರಿಗೆ ಅವಕಾಶ ನೀಡಲಿದ್ದಾರೆ. ಇನ್ನುಳಿದಂತೆ ಶಾರ್ದೂಲ್ ಠಾಕೂರ್ ಮತ್ತು ಉಮ್ರಾನ್ ಮಲಿಕ್ ಅವರನ್ನು ಪ್ಲೇಯಿಂಗ್ XI ನಿಂದ ಹೊರಗಿಡಬಹುದು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More