Home> Sports
Advertisement

Ireland vs India: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 2 ರನ್ ಗಳ ರೋಚಕ ಜಯ 

ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಎರಡು ರನ್ ಗಳ ರೋಚಕ ಗೆಲುವು ಸಾಧಿಸಿದೆ.

 Ireland vs India: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ 2 ರನ್ ಗಳ ರೋಚಕ ಜಯ 

ಡಬ್ಲಿನ್: ಐರ್ಲೆಂಡ್ ತಂಡದ ವಿರುದ್ಧ ಟೀಮ್ ಇಂಡಿಯಾ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಎರಡು ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ ತಂಡವು ಐರ್ಲೆಂಡ್ ತಂಡವನ್ನು 20 ಓವರ್ ಗಳಲ್ಲಿ  ಏಳು ವಿಕೆಟ್ ನಷ್ಟಕ್ಕೆ 139 ರನ್ ಗಳಿಗೆ ಕಟ್ಟಿ ಹಾಕಿತು.

ಟೀಮ್ ಇಂಡಿಯಾದ ಪರವಾಗಿ ಬುಮ್ರಾ, ಪ್ರಸಿದ್ದ,ರವಿ ಬಿಶ್ನೋಯಿ, ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.ಇದೆ ವೇಳೆ ಐರ್ಲೆಂಡ್ ತಂಡವು ನೀಡಿದ 140 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.5 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 47 ರನ್ ಗಳಿಸುವ ಮೂಲಕ ಡಕ್ ವರ್ತ ಲೂಯಿಸ್ ನಿಯಮದಡಿ ಎರಡು ರನ್ ಗಳ ರೋಚಕ ಗೆಲುವು ಸಾಧಿಸಿದೆ.

ಟೀಮ್ ಇಂಡಿಯಾದ ಪರವಾಗಿ ಯಶಸ್ವಿ ಜೈಸ್ವಾಲ್ 24, ಋತುರಾಜ್ ಗಾಯಕ್ವಾಡ್ 19 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ತಲುಪಿಸಿದರು.

ಟೀಮ್ ಇಂಡಿಯಾ ತಂಡದ ಬ್ಯಾಟಿಂಗ್ ವೇಳೆ ಪಂದ್ಯಕ್ಕೆ ಮಳೆ ಅಡ್ಡಿಯಾಗಿದ್ದರಿಂದಾಗಿ ಫಲಿತಾಂಶಕ್ಕಾಗಿ ಡಕ್ ವರ್ತ್ ಲೂಯಿಸ್ ನಿಯಮಕ್ಕೆ ಮೊರೆ ಹೋಗಲಾಯಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More