Home> Sports
Advertisement

ಬಿಡಬ್ಲ್ಯುಎಫ್ ವಿಶ್ವ ಟೂರ್‌ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ ಸಿಂಧು

ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಬಿಡಬ್ಲ್ಯುಎಫ್ ವಿಶ್ವ ಟೂರ್‌ ಫೈನಲ್ಸ್‌ 2018 ಚಾಂಪಿಯನ್‌ಶಿಪ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

 ಬಿಡಬ್ಲ್ಯುಎಫ್ ವಿಶ್ವ ಟೂರ್‌ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ ಸಿಂಧು

ನವದೆಹಲಿ: ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಬಿಡಬ್ಲ್ಯುಎಫ್ ವಿಶ್ವ ಟೂರ್‌ ಫೈನಲ್ಸ್‌ 2018 ಚಾಂಪಿಯನ್‌ಶಿಪ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಜಪಾನಿನ ನೊಜೊಮಿ ಒಕುಹಾರ ಅವರನ್ನು ಫೈನಲ್ ನಲ್ಲಿ 21-19, 21-17ರದಲ್ಲಿ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದರು. ಆ ಮೂಲಕ ಇದೆ ಮೊದಲ ಭಾರಿಗೆ ಪ್ರಶಸ್ತಿಯನ್ನು ಗೆದ್ದ ಸಾಧನೆ ಮಾಡಿದ್ದಾರೆ.ಈ ಹಿಂದೆ ಫೈನಲ್ ಗೆ ತಲುಪಿದರು ಕೂಡ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದ್ದರು ಆದರೆ ಈ ಬಾರಿ  ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಅದರ ಬರವನ್ನು ನೀಗಿಸಿಕೊಂಡಿದ್ದಾರೆ.

ಶನಿವಾರವಷ್ಟೇ 21-16, 25-23ರಲ್ಲಿ ಥಾಯ್ಲೆಂಡ್ನ ರಾಚ್ಸಾಕ್ ಇಥಾನ್ ಅವರನ್ನು ಸೆಮಿಫೈನಲ ನಲ್ಲಿ ಸೋಲಿಸುವ  ಮೂಲಕ ಫೈನಲ್ ಗೆ ತಲುಪಿದ್ದರು. ವಿಶೇಷವೆಂದರೆ ಈ ಟೂರ್ನಿಯಲ್ಲಿ ಸಿಂಧು ಅಜೇಯರಾಗಿ ಫೈನಲ್ ಗೆ ತಲುಪಿದ್ದರು,
 

Read More