Home> Sports
Advertisement

Team India: ಟೀಂ ಇಂಡಿಯಾದ ಗೆಲುವಿನ ನಾಗಾಲೋಟ: ಆಸ್ಟ್ರೇಲಿಯಾದ ಈ ದಾಖಲೆ ಉಡೀಸ್

ಸೌತ್ ಆಫ್ರಿಕಾಗೆ ಮೊದಲ ಬಾರಿಗೆ ಭಾರತದಲ್ಲಿ ಸೋಲಿನ ರುಚಿ ತೋರಿಸಿದ್ದ ಟೀಂ ಇಂಡಿಯಾ ಇದೀಗ ಕಾಂಗರೂ ಪಡೆ ಆಸ್ಟ್ರೇಲಿಯಾದ ವಿಶ್ವ ದಾಖಲೆಯನ್ನು ಉಡೀಸ್ ಮಾಡಿದೆ. ಇತ್ತೀಚೆಗೆಯಷ್ಟೇ ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿತ್ತು. ಈ ಮೂಲಕ ಭಾರತ ಹೊಸ ದಾಖಲೆ ಬರೆದಿದೆ.  

Team India: ಟೀಂ ಇಂಡಿಯಾದ ಗೆಲುವಿನ ನಾಗಾಲೋಟ: ಆಸ್ಟ್ರೇಲಿಯಾದ ಈ ದಾಖಲೆ ಉಡೀಸ್

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಆಡಲಿರುವ ಭಾರತ ಈಗಾಗಲೇ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿದೆ. ಇನ್ನು ಜಸ್ಪ್ರೀತ್ ಬುಮ್ರಾ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಮೊಹಮ್ಮದ್ ಶಮಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಈ ವರ್ಷದಲ್ಲಿ ಟೀಂ ಇಂಡಿಯಾ ಅನೇಕ ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಹೊಸ ದಾಖಲೆಯನ್ನು ಬರೆದಿದೆ.

ಇದನ್ನೂ ಓದಿ: Cricket: ಈತನ ಬೌಲಿಂಗ್ ರಭಸಕ್ಕೆ ಪೀಸ್ ಪೀಸ್ ಆಯ್ತು ಎದುರಾಳಿಯ ಬ್ಯಾಟ್: ವಿಡಿಯೋ ನೋಡಿ!

ಸೌತ್ ಆಫ್ರಿಕಾಗೆ ಮೊದಲ ಬಾರಿಗೆ ಭಾರತದಲ್ಲಿ ಸೋಲಿನ ರುಚಿ ತೋರಿಸಿದ್ದ ಟೀಂ ಇಂಡಿಯಾ ಇದೀಗ ಕಾಂಗರೂ ಪಡೆ ಆಸ್ಟ್ರೇಲಿಯಾದ ವಿಶ್ವ ದಾಖಲೆಯನ್ನು ಉಡೀಸ್ ಮಾಡಿದೆ. ಇತ್ತೀಚೆಗೆಯಷ್ಟೇ ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದುಕೊಂಡಿತ್ತು. ಈ ಮೂಲಕ ಭಾರತ ಹೊಸ ದಾಖಲೆ ಬರೆದಿದೆ.  

ಕ್ರಿಕೆಟ್ ಇತಿಹಾಸದಲ್ಲಿ ಅನೇಕ ದಾಖಲೆಗಳು ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದೆ. ಅದರಲ್ಲಿ ಒಂದೇ ವರ್ಷ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯೂ ಒಂದು. ಸ್ಟೀವ್ ವಾ ನಾಯಕತ್ವದ ಆಸೀಸ್ ಪಡೆಯು 2003ರಲ್ಲಿ ಬರೋಬ್ಬರಿ 38 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿತ್ತು.

2003ರಲ್ಲಿ 8 ಟೆಸ್ಟ್ ಹಾಗೂ 30 ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡವು ಈ ದಾಖಲೆ ಬರೆದಿತ್ತು. ಇದಾದ ಬಳಿಕ ಯಾವುದೇ ತಂಡ ಒಂದೇ ವರ್ಷ ಇಷ್ಟೊಂದು ಪಂದ್ಯಗಳನ್ನು ಗೆದ್ದಿರಲಿಲ್ಲ.

ಆದರೆ ಈ ವರ್ಷ ಟೀಮ್ ಇಂಡಿಯಾ ಅಬ್ಬರಿಸುತ್ತಿದ್ದು, ಗೆಲುವಿನ ನಾಗಾಲೋಟ ಮುಂದುವರೆಸಿದೆ. ಒಟ್ಟು 38 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ ಆಸ್ಟ್ರೇಲಿಯಾದ ದಾಖಲೆಯನ್ನು ಸರಿಗಟ್ಟಿದೆ.

ಇದನ್ನೂ ಓದಿ: T20 World Cup: ಟಿ20 ವಿಶ್ವಕಪ್ ನಲ್ಲಿ ಬುಮ್ರಾ ಬದಲಿಗೆ ಎಂಟ್ರಿ ಕೊಟ್ರು ಈ ಅಪಾಯಕಾರಿ ಬೌಲರ್!

2022 ರಲ್ಲಿ ಭಾರತ 2 ಟೆಸ್ಟ್, 13 ಏಕದಿನ ಹಾಗೂ 23 ಟಿ20 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 38 ಪಂದ್ಯಗಳನ್ನು ಗೆದ್ದಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More