Asia Cup Schedule 2023: ಮುಂಬರುವ ಏಷ್ಯಾ ಕಪ್ 2023 ರ ವೇಳಾಪಟ್ಟಿಯನ್ನು ಘೋಷಿಸಲಾಗಿದೆ. ಆದರೆ ಈ ಬಾರಿಯ ಏಷ್ಯಾ ಕಪ್ ಕೇವಲ ಕೇವಲ ಪಾಕಿಸ್ತಾನ ಒಂದೇ ವಹಿಸುತ್ತಿಲ್ಲ. ಏಕೆಂದರೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) 2023 ರ ಏಷ್ಯಾ ಕಪ್ಗಾಗಿ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡಿದೆ. ಈ ಮೊದಲು ಕೇವಲ ಪಾಕಿಸ್ತಾನ ಒಂದೇ ದೇಶಕ್ಕೆ ಈ ಪಂದ್ಯಾವಳಿಯ ಆತಿಥ್ಯ ನೀಡಲಾಗಿತ್ತು.
ಹೈಬ್ರಿಡ್ ಮಾಡೆಲ್ ಗೆ ಸಿಕ್ತು ಅನುಮೋದನೆ
ಇದನ್ನೂ ಓದಿ-Biparjoy Update: ಗುಜರಾತ್ ನಲ್ಲಿ 94,427 ಜನರು ಶಿಫ್ಟ್, 1521 ಹೋಮ್ ಶೇಲ್ಟರ್ ಗಳ ನಿರ್ಮಾಣ
ಈ ದಿನಾಂಕದಿಂದ ಟೂರ್ನಿ ಆರಂಭಗೊಳ್ಳಲಿದೆ
ಪಂದ್ಯಾವಳಿಯು ಆಗಸ್ಟ್ 31 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಚಾಂಪಿಯನ್ಶಿಪ್ನಲ್ಲಿರುವ ಆರು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ಪ್ರವೇಶಿಸಲಿವೆ. ಇದಾದ ನಂತರ ಅಗ್ರ-2 ತಂಡಗಳು ಫೈನಲ್ನಲ್ಲಿ ಆಡಲಿವೆ. 13-ಪಂದ್ಯಗಳ ಚಾಂಪಿಯನ್ಶಿಪ್ನಲ್ಲಿ ಮೂರು ಬಹು ನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯಗಳನ್ನು ಸಮರ್ಥವಾಗಿ ಆಡಲು ಭಾರತ ಮತ್ತು ಪಾಕಿಸ್ತಾನವು ಒಂದೇ ಗುಂಪಿನಲ್ಲಿರುವ ನಿರೀಕ್ಷೆಯಿದೆ. ಚಾಂಪಿಯನ್ಶಿಪ್ ನಲ್ಲಿ ಪಾಕಿಸ್ತಾನದಲ್ಲಿ ನಡೆಯಬೇಕಿರುವ ಪಂದ್ಯಗಳು ಲಾಹೋರ್ ನಲ್ಲಿ ನಡೆಯಲಿವೆ.
ಇದನ್ನೂ ಓದಿ-Uniform Civil Code ಕುರಿತು ಸಮಾಲೋಚನೆ ಪ್ರಕ್ರಿಯೆಗೆ ಚಾಲನೆ ನೀಡಿದ ಕೇಂದ್ರ ಕಾನೂನು ಆಯೋಗ
ಭಾರತ ಮತ್ತು ಪಾಕಿಸ್ತಾನದ ಹೊರತಾಗಿ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ಟೂರ್ನಿಯಲ್ಲಿ ಆಡಲಿವೆ. ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ಗೆ ಮೊದಲು ಈ ಟೂರ್ನಿಯನ್ನು ಮುಖ್ಯವೆಂದು ಪರಿಗಣಿಸಲಾಗಿದೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.