Home> Sports
Advertisement

SRH vs GT, IPL 2022: ಗುಜರಾತ್ ಟೈಟಾನ್ಸ್‌ಗೆ ಸೋಲಿನ ರುಚಿ ತೋರಿಸಿದ ಹೈದರಾಬಾದ್

ಸತತ 3 ಗೆಲುವು ಸಾಧಿಸಿದ್ದ ಗುಜರಾತ್ ತಂಡಗ ಗೆಲುವಿನ ನಾಗಾಲೋಟಕ್ಕೆ ಹೈದರಾಬಾದ್ ಬ್ರೇಕ್ ಹಾಕಿತು.

SRH vs GT, IPL 2022: ಗುಜರಾತ್ ಟೈಟಾನ್ಸ್‌ಗೆ ಸೋಲಿನ ರುಚಿ ತೋರಿಸಿದ ಹೈದರಾಬಾದ್

ಮುಂಬೈ: ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಸೋಮವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್‍ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 8 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಗುಜರಾತ್ ನಿಗದಿತ 20 ಓವರ್‍ ಗಳಲ್ಲಿ 7 ವಿಕೆಟ್‍ ಕಳೆದುಕೊಂಡು 162 ರನ್‍ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಹೈದರಾಬಾದ್ 19.1 ಓವರ್‍ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಭರ್ಜರಿ ಗೆಲುವು ಸಾಧಿಸಿತು.

ಸತತ 3 ಗೆಲುವು ಸಾಧಿಸಿದ್ದ ಗುಜರಾತ್ ತಂಡಗ ಗೆಲುವಿನ ನಾಗಾಲೋಟಕ್ಕೆ ಹೈದರಾಬಾದ್ ಬ್ರೇಕ್ ಹಾಕಿತು. ಹಾರ್ದಿಕ್ ಪಾಂಡ್ಯ ಪಡೆಗೆ ಸೋಲಿನ ರುಚಿ ತೋರಿಸುವ ಮೂಲಕ ಕೇನ್ ವಿಲಿಯಮ್ಸನ್ ಪಡೆ 2ನೇ ಗೆಲುವು ದಾಖಲಿಸಿತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More