Home> Sports
Advertisement

ಮೊದಲ ಏಕದಿನಕ್ಕೆ Team India Playing 11 ರೆಡಿ: ಈ ಸ್ಫೋಟಕ ಬ್ಯಾಟ್ಸ್’ಮನ್ ಕಂ ವಿಕೆಟ್ ಕೀಪರ್ ತಂಡದಿಂದ ಔಟ್!

Team India Probable playing 11: ವೆಸ್ಟ್ ಇಂಡೀಸ್ ವಿರುದ್ಧದ ಈ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರಂತಹ ಆಟಗಾರರನ್ನು ಸೇರಿಸಿಕೊಳ್ಳಲಾಗುತ್ತದೆ.

ಮೊದಲ ಏಕದಿನಕ್ಕೆ Team India Playing 11 ರೆಡಿ: ಈ ಸ್ಫೋಟಕ ಬ್ಯಾಟ್ಸ್’ಮನ್ ಕಂ ವಿಕೆಟ್ ಕೀಪರ್ ತಂಡದಿಂದ ಔಟ್!

IND vs WI, 1st ODI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯವು ಗುರುವಾರ, ಜುಲೈ 27 ರಂದು ಬ್ರಿಡ್ಜ್‌ಟೌನ್ (ಬಾರ್ಬಡೋಸ್) ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಈ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತವು ತನ್ನ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಿದ್ಧವಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಈ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರಂತಹ ಆಟಗಾರರನ್ನು ಸೇರಿಸಿಕೊಳ್ಳಲಾಗುತ್ತದೆ. ರೋಹಿತ್ ಶರ್ಮಾ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ. ಇನ್ನು ಈ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ 11 ಬಹುತೇಕ ಫಿಕ್ಸ್ ಆಗಿದೆ.

ಇದನ್ನೂ ಓದಿ: 1 ಶತಕಕ್ಕೆ 7 ವಿಶ್ವದಾಖಲೆಗಳು ಉಡೀಸ್..! ‘ಕಿಂಗ್’ ಕೊಹ್ಲಿ ಬತ್ತಳಿಕೆ ಸೇರಿದ ಸಚಿನ್, ಜಾಕ್ವೆಸ್ ಕಾಲಿಸ್’ರ ಈ ದಾಖಲೆ

ಆರಂಭಿಕರು:

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಜೊತೆ ಶುಭಮನ್ ಗಿಲ್ ಓಪನಿಂಗ್ ಮಾಡಬಹುದು. ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಜೋಡಿ ಅತ್ಯಂತ ಅಪಾಯಕಾರಿ ಮತ್ತು ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಪವರ್-ಪ್ಲೇನಲ್ಲಿ ತೀವ್ರವಾಗಿ ರನ್ ಲೂಟಿ ಮಾಡುವ ಪರಿಣತಿ ಹೊಂದಿದ್ದಾರೆ. ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ್ದಾರೆ. ಹೀಗಿರುವಾಗ ನಾಯಕ ರೋಹಿತ್ ಶರ್ಮಾ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಅವರನ್ನು ಪ್ಲೇಯಿಂಗ್ XI ನಿಂದ ತ್ಯಾಗ ಮಾಡಬಹುದು.

ಮಧ್ಯಮ ಕ್ರಮಾಂಕ:

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌’ಗೆ ಬರಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಸಖತ್ ಬ್ಯಾಟಿಂಗ್ ಮಾಡುತ್ತಿದ್ದು, ಕಳೆದ ಟೆಸ್ಟ್’ನಲ್ಲಿ ತಮ್ಮ  ಅಂತಾರಾಷ್ಟ್ರೀಯ ಕ್ರಿಕೆಟ್’ನ 76 ಶತಕವನ್ನು ಬಾರಿಸಿದ್ದರು. ಮತ್ತೊಂದೆಡೆ ಭಾರತ ತಂಡದ ನಿರ್ವಹಣಾ ಸಮಿತಿಯು ಸೂರ್ಯಕುಮಾರ್ ಯಾದವ್‌ ಅವರಿಗೆ ಪ್ಲೇಯಿಂಗ್ ಇಲೆವೆನ್’ನಲ್ಲಿ 4ನೇ ಬ್ಯಾಟ್ಸ್‌ಮನ್ ಆಗಿ ಅವಕಾಶ ನೀಡಬಹುದು. ಇಶಾನ್ ಕಿಶನ್‌ ಗೆ 5ನೇ ಕ್ರಮಾಂಕದ ಬ್ಯಾಟಿಂಗ್ ಸ್ಥಾನದಲ್ಲಿ ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್ ಆಗಿ ಸ್ಥಾನ ನೀಡಬಹುದು. ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ಇಶಾನ್ ಕಿಶನ್ ವಿಕೆಟ್ ಕೀಪಿಂಗ್ ಮಾಡಿದ್ದಾರೆ. ಹೀಗಿರುವಾಗ ನಾಯಕ ರೋಹಿತ್ ಶರ್ಮಾ ಏಕದಿನ ಸರಣಿಯಲ್ಲೂ ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಆಗಿ ಉಳಿಸಿಕೊಳ್ಳಲಿದ್ದಾರೆ. ಈ ಬೆಳವಣಿಗೆ ನಡೆದರೆ, ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಹೊರಗಿಡಬಹುದು

ಆಲ್’ರೌಂಡರ್:

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಉಪನಾಯಕ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಗಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ನಾಯಕ ರೋಹಿತ್ ಶರ್ಮಾ 7ನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾಗೆ ಅವಕಾಶ ನೀಡಲಿದ್ದಾರೆ. ರವೀಂದ್ರ ಜಡೇಜಾ ಸ್ಪಿನ್ ಬೌಲಿಂಗ್ ಮೂಲಕ ಟೀಂ ಇಂಡಿಯಾವನ್ನು ಬ್ಯಾಟಿಂಗ್ ನಲ್ಲಿ ಬಲಿಷ್ಠಗೊಳಿಸಲಿದ್ದಾರೆ.

ಸ್ಪಿನ್ ಬೌಲಿಂಗ್:

ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಸೇರ್ಪಡೆಯಾಗಲಿದ್ದಾರೆ. ನಾಯಕ ರೋಹಿತ್ ಶರ್ಮಾ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ಪ್ಲೇಯಿಂಗ್ XI ನಿಂದ ಹೊರಗಿಡಬಹುದು.

ವೇಗದ ಬೌಲಿಂಗ್ ವಿಭಾಗ:

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ವೇಗದ ಬೌಲರ್‌ಗಳಾದ ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕತ್ ಮತ್ತು ಮುಖೇಶ್ ಕುಮಾರ್ ಅವರಿಗೆ ಅವಕಾಶ ನೀಡಲಿದ್ದಾರೆ. ಶಾರ್ದೂಲ್ ಠಾಕೂರ್ ಮತ್ತು ಉಮ್ರಾನ್ ಮಲಿಕ್ ಅವರನ್ನು ಹೊರಗಿಡುವ ಸಾಧ್ಯತೆ ಇದೆ.

ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್.

ಏಕದಿನ ಸರಣಿಗೆ ಟೀಂ ಇಂಡಿಯಾದ ಪೂರ್ಣ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಯುಜ್ವೇಂದ್ರ ಚಾಹಲ್ ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

ಇದನ್ನೂ ಓದಿ:  ಬೆಂಗಳೂರಿನಲ್ಲಿ ಕಾಣಿಸಿಕೊಂಡ ‘ಸ್ವರ್ಗದ ಬಾಗಿಲು’! ನಿಗೂಢ ವಿಸ್ಮಯಕ್ಕೆ ಬೆರಗಾದ ಜನರು!

ಭಾರತ vs ವೆಸ್ಟ್ ಇಂಡೀಸ್ ODI ಸರಣಿ:

1ನೇ ODI, ಜುಲೈ 27, ರಾತ್ರಿ 7.00, ಬಾರ್ಬಡೋಸ್

2ನೇ ODI, ಜುಲೈ 29, ರಾತ್ರಿ 7.00, ಬಾರ್ಬಡೋಸ್

3ನೇ ODI, ಆಗಸ್ಟ್ 1, ರಾತ್ರಿ 7.00, ಟ್ರಿನಿಡಾಡ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Read More