Home> Sports
Advertisement

Women’s World Cup 2023: ಕಮರಿದ ಹ್ಯಾಟ್ರಿಕ್ ಗೆಲುವಿನ ಕನಸು: ಇಂಗ್ಲೆಂಡ್ ವಿರುದ್ಧ ಸೋಲುಂಡ ಟೀಂ ಇಂಡಿಯಾ ವನಿತೆಯರು

India vs England: ಈ ಮೂಲಕ ಇಂಗ್ಲೆಂಡ್ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಭಾರತದ ವೇಗಿ ರೇಣುಕಾ ಸಿಂಗ್ ಠಾಕೂರ್ 5 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ತಂಡವನ್ನು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 151 ರನ್‌ಗಳಿಗೆ ಕಟ್ಟಿಹಾಕುವಂತೆ ಭಾರತ ಮಾಡಿದೆ. ಇದಕ್ಕೂ ಮೊದಲು ಹರ್ಮನ್‌ಪ್ರೀತ್ ಕೌರ್ ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.  

Women’s World Cup 2023:  ಕಮರಿದ ಹ್ಯಾಟ್ರಿಕ್ ಗೆಲುವಿನ ಕನಸು: ಇಂಗ್ಲೆಂಡ್ ವಿರುದ್ಧ ಸೋಲುಂಡ ಟೀಂ ಇಂಡಿಯಾ ವನಿತೆಯರು

India vs England: ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ತನ್ನ ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದಿದೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು 6 ವಿಕೆಟ್‌ಗಳಿಂದ ಸೋಲಿಸಿತು.  ಇಂದು ಮೂರನೇ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಿದ್ದು, ಭಾರತದ ಮಹಿಳಾಮಣಿಗಳು 11 ರನ್ ಗಳ ಅಂತರದಿಂದ ಸೋಲು ಕಂಡಿದ್ದಾರೆ.

ಈ ಮೂಲಕ ಇಂಗ್ಲೆಂಡ್ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಭಾರತದ ವೇಗಿ ರೇಣುಕಾ ಸಿಂಗ್ ಠಾಕೂರ್ 5 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ತಂಡವನ್ನು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 151 ರನ್‌ಗಳಿಗೆ ಕಟ್ಟಿಹಾಕುವಂತೆ ಭಾರತ ಮಾಡಿದೆ. ಇದಕ್ಕೂ ಮೊದಲು ಹರ್ಮನ್‌ಪ್ರೀತ್ ಕೌರ್ ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಇದನ್ನೂ ಓದಿ: MS Dhoni: ಈ ಪಂದ್ಯದ ಬಳಿಕ ಎಂಎಸ್ ಧೋನಿ IPLನಿಂದ ನಿವೃತ್ತಿ: CSK ಮೂಲದಿಂದ ಬಿಗ್ ಅಪ್ಡೇಟ್!

ಮಹಿಳಾ ಟಿ20 ಅಂತಾರಾಷ್ಟ್ರೀಯ ರ್ಯಾಕಿಂಗ್‌ನಲ್ಲಿ ಭಾರತ ತಂಡ ನಾಲ್ಕನೇ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ತಂಡ ಎರಡನೇ ಸ್ಥಾನದಲ್ಲಿದೆ. ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ ಕೂಡ ತನ್ನ ಎರಡೂ ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದಿದೆ. ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಗುಂಪಿನಲ್ಲಿ ಭಾರತ ತಂಡ ಎರಡನೇ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವೆ ಇದುವರೆಗೆ 26 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಇದರಲ್ಲಿ ಇಂಗ್ಲೆಂಡ್ 19 ಪಂದ್ಯಗಳನ್ನು ಗೆದ್ದಿದೆ. ಭಾರತ ತಂಡ ಕೇವಲ 7ರಲ್ಲಿ ಗೆಲುವು ಸಾಧಿಸಿದೆ.

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ರಿಚಾ ಘೋಷ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ರೇಣುಕಾ ಠಾಕೂರ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜಿ ವಸ್ತ್ರಾಕರ್, ರಾಜಿ ವಸ್ತ್ರಾಕರ್ .

ಇದನ್ನೂ ಓದಿ: CCL 2023: ಬಂಗಾಳದ ಹುಲಿಗಳ ಸದೆಬಡಿದ ಕರ್ನಾಟಕ ಬುಲ್ಡೋಜರ್ಸ್: CCLನಲ್ಲಿ ಕಿಚ್ಚ ಪಡೆ ಶುಭಾರಂಭ

ಇಂಗ್ಲೆಂಡ್ ತಂಡ: ಹೀದರ್ ನೈಟ್ (ಕ್ಯಾ), ಲಾರೆನ್ ಬೆಲ್, ಮಾಯಾ ಬೌಶಿರ್, ಕ್ಯಾಥರೀನ್ ಸೀವರ್-ಬ್ರಂಟ್, ಎಲ್ಲಿಸ್ ಕ್ಯಾಪ್ಸಿ, ಕೇಟ್ ಕ್ರಾಸ್, ಫ್ರೇಯಾ ಡೇವಿಸ್, ಚಾರ್ಲಿ ಡೀನ್, ಸೋಫಿಯಾ ಡಂಕ್ಲೆ, ಸೋಫಿ ಸಿಂಗಲ್‌ಸ್ಟೋನ್, ಸಾರಾ ಗ್ಲೆನ್, ಆಮಿ ಜೋನ್ಸ್, ನ್ಯಾಟ್ ಸೀವರ್-ಬ್ರಂಟ್, ಲಾರೆನ್-ಬ್ರಂಟ್ ವಿನ್‌ಫೀಲ್ಡ್, ದೇಬ್ ಯಾಟ್.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More