Home> Sports
Advertisement

ಮಗಳ ಕೈ ಹಿಡಿದು ಸಮುದ್ರ ತಟದಲ್ಲಿ ಪುಟ್ಟ ಪುಟ್ಟ ಹೆಜ್ಜೆ ಹಾಕಿದ ವಿರುಷ್ಕಾ..!

ಶ್ರೀಲಂಕಾ ವಿರುದ್ಧದ ಟಿ 20 ಐ ಸರಣಿಯಿಂದ ವಿರಾಮ ತೆಗೆದುಕೊಂಡಿರುವ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಮಗಳು ಹಾಗೂ ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್‌ ಮಾಡುತ್ತಿದ್ದಾರೆ. ಈ ಕುರಿತು ಫೋಟೋ ಒಂದನ್ನು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಕೊಹ್ಲಿ ಹಾಗೂ ಅನುಷ್ಕಾ ತಮ್ಮ ಮಗಳು ವಮಿಕಾ ಕೈ ಹಿಡಿದು ಬೀಚ್‌ನಲ್ಲಿ ನಡೆಯುತ್ತಿದ್ದಾರೆ. ಚಿತ್ರವನ್ನು ನೋಡಿದ ಇಬ್ಬರು ಸ್ಟಾರ್‌ಗಳ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಗಳ ಕೈ ಹಿಡಿದು ಸಮುದ್ರ ತಟದಲ್ಲಿ ಪುಟ್ಟ ಪುಟ್ಟ ಹೆಜ್ಜೆ ಹಾಕಿದ ವಿರುಷ್ಕಾ..!

Virat Kohli daughter : ಶ್ರೀಲಂಕಾ ವಿರುದ್ಧದ ಟಿ 20 ಐ ಸರಣಿಯಿಂದ ವಿರಾಮ ತೆಗೆದುಕೊಂಡಿರುವ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಮಗಳು ಹಾಗೂ ಪತ್ನಿ ಅನುಷ್ಕಾ ಶರ್ಮಾ ಜೊತೆ ಎಂಜಾಯ್‌ ಮಾಡುತ್ತಿದ್ದಾರೆ. ಈ ಕುರಿತು ಫೋಟೋ ಒಂದನ್ನು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ಕೊಹ್ಲಿ ಹಾಗೂ ಅನುಷ್ಕಾ ತಮ್ಮ ಮಗಳು ವಮಿಕಾ ಕೈ ಹಿಡಿದು ಬೀಚ್‌ನಲ್ಲಿ ನಡೆಯುತ್ತಿದ್ದಾರೆ. ಚಿತ್ರವನ್ನು ನೋಡಿದ ಇಬ್ಬರು ಸ್ಟಾರ್‌ಗಳ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಫೋಟೋದಲ್ಲಿ ಅನುಷ್ಕಾ ಕಪ್ಪು ಬಣ್ಣದ ಬಟ್ಟೆಯನ್ನು ಧರಿಸಿದ್ದಾರೆ. ವಿರಾಟ್ ಕ್ಯಾಪ್‌ನೊಂದಿಗೆ ಕಪ್ಪು ಶರ್ಟ್ ಹಾಕಿಕೊಂಡಿದ್ದಾರೆ. ಮಗಳ ಜೊತೆಗಿನ ಸುಂದರ ಫೋಟೋ ಹಂಚಿಕೊಂಡಿರುವ ವಿರಾಟ್‌, "ದೇವರೆ.. ನಿನ್ನ ಹತ್ತಿನ ನಾವು ಎನನ್ನೂ ಕೇಳಲ್ಲ, ನಿನ್ನ ಆರ್ಶಿವಾದವೊಂದಿದ್ದರೆ ಸಾಕಷ್ಟೆ.. (ರಬ್ಬಾ ಬಕ್ಷಿಯಾನ್ ತು ಎಣ್ಣಿಯಾನ್ ಮೆಹರ್ಬಾನಿಯನ್, ಹೋರ್ ತೇರ್ತೋ ಕುಚ್ ನಿ ಮಂಗ್ಡಾ, ಬಾಸ್ ತೇರಾ ಶುಕರ್ ಅದಾ ಕರ್ದನ್) ಎಂದು ಕ್ಯಾಪ್ಟನ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Dwayne Pretorius retirement: ಕ್ರಿಕೆಟ್ ಜಗತ್ತಿಗೆ ದಿಢೀರ್ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್!

 
 
 
 

 
 
 
 
 
 
 
 
 
 
 

A post shared by Virat Kohli (@virat.kohli)

ಸದ್ಯ ವಿರಾಟ್‌ ಬಾಂಗ್ಲಾದೇಶ ಟೆಸ್ಟ್ ಸರಣಿಯಿಂದ ದೂರವಾಗಿದ್ದಾರೆ. ಕುಟುಂಬದ ಜೊತೆ ಸಂತೋಷದ ಸಮಯವನ್ನು ಕಳೆಯುತ್ತಿದ್ದಾರೆ. ತಮ್ಮ ಅಭಿಮಾನಿಗಳಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನು ಅನುಷ್ಕಾ ಮಹಿಳಾ ಕ್ರಿಕೆಟರ್‌ ಜೀವನಚರಿತ್ರೆ ಆಧಾರಿತ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕ್ರಿಕೆಟರ್‌ ಜೂಲನ್ ಗೋಸ್ವಾಮಿ ಪಾತ್ರದಲ್ಲಿ ಅನುಷ್ಕಾ ನಟಿಸಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More