Home> World Cup 2023
Advertisement

Reserve Day Rules : ಮಳೆಯಿಂದ ಸೆಮಿ ಫೈನಲ್ ರದ್ದಾದರೆ ಫೈನಲ್ ಹಣಾಹಣಿ ಈ ಎರಡು ತಂಡಗಳ ಮಧ್ಯೆ

ICC Cricket World Cup 2023 Semifinal:ಸೆಮಿಫೈನಲ್ ಮತ್ತು ಫೈನಲ್ ಎರಡಕ್ಕೂ 'ರಿಸರ್ವ್ ಡೇಸ್'  ನಿಯಮವನ್ನು   ನಿಗದಿ ಮಾಡಲಾಗಿದೆ ಎಂದು ಐಸಿಸಿ ಪ್ರಕಟಿಸಿದೆ. ಈ ನಿಯಮ ಏನು ಹೇಳುತ್ತದೆ. 
 

Reserve Day Rules : ಮಳೆಯಿಂದ ಸೆಮಿ ಫೈನಲ್  ರದ್ದಾದರೆ ಫೈನಲ್ ಹಣಾಹಣಿ ಈ ಎರಡು  ತಂಡಗಳ  ಮಧ್ಯೆ

ICC Cricket World Cup 2023 Semifinal : ಐಸಿಸಿ ಕ್ರಿಕೆಟ್ ವಿಶ್ವಕಪ್ ಕೊನೆಯ ಹಂತ ತಲುಪುತ್ತಿದೆ. ನಾಳೆ ಪಂದ್ಯಾವಳಿಯ ಮೊದಲ  ಸೆಮಿಫೈನಲ್‌ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.  ಮೊದಲ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಎರಡನೇ ಸೆಮಿಫೈನಲ್‌ ಪಂದ್ಯ  ಆಸ್ಟ್ರೇಲಿಯಾ  ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ  ನಡೆಯಲಿದೆ. 

ರಿಸರ್ವ್ ಡೇಸ್ ರೂಲ್ಸ್ (Reserve Day Rules) : 

ಸೆಮಿಫೈನಲ್ ಮತ್ತು ಫೈನಲ್ ಎರಡಕ್ಕೂ 'ರಿಸರ್ವ್ ಡೇಸ್'  ನಿಯಮವನ್ನು ನಿಗದಿ ಮಾಡಲಾಗಿದೆ ಎಂದು ಐಸಿಸಿ ಪ್ರಕಟಿಸಿದೆ. ಮೊದಲ ದಿನದಂದು ಮಳೆಯಿಂದ ಪಂದ್ಯಗಳಿಗೆ ಅಡ್ಡಿಯಾದರೆ  ಅದೇ ಹಂತದಿಂದ ಪಂದ್ಯಗಳು ಎರಡನೇ ದಿನ ಮುಂದುವರೆಯುತ್ತದೆ. 

ಇದನ್ನೂ ಓದಿ : ವಿಶ್ವಕಪ್ ಗೆದ್ದ ತಂಡ ಗೆಲ್ಲುವ ಒಟ್ಟು ಮೊತ್ತ ಎಷ್ಟು? ಭಾರತ ಈಗಾಗಲೇ ಗೆದ್ದಿರುವುದು ಎಷ್ಟು ಕೋಟಿ ?

ಫೈನಲ್ ಪಂದ್ಯ ಯಾರ ನಡುವೆ ? : 
ಒಂದು ವೇಳೆ ಎರಡೂ ದಿನಗಳಲ್ಲಿ ಎರಡೂ ಸೆಮಿಫೈನಲ್‌ಗಳು ಮಳೆಯಿಂದಾಗಿ ರದ್ದಾದರೆ ಆತಿಥೇಯ ಭಾರತ ಭಾನುವಾರ ಅಹಮದಾಬಾದ್‌ನಲ್ಲಿ ನಡೆಯುವ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

 

ICC ಕ್ರಿಕೆಟ್ ವಿಶ್ವಕಪ್ 2023 ತಂಡಗಳು : 
ಭಾರತ:
ರೋಹಿತ್ ಶರ್ಮಾ ( ನಾಯಕ ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಪ್ರಸಿದ್ಧ್ ಕೃಷ್ಣ, ಸೂರ್ಯಕುಮಾರ್ ಯಾದವ್

ಇದನ್ನೂ ಓದಿ : ಈ 2 ಆಟಗಾರರನ್ನು ಕೈಬಿಟ್ಟ ರೋಹಿತ್ ಶರ್ಮಾ.. ಸೆಮಿಫೈನಲ್ ಪಂದ್ಯಕ್ಕೆ ಟೀಮ್‌ ಇಂಡಿಯಾ ಪ್ಲೇಯಿಂಗ್‌ 11 ಇದೇ.!

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ ), ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲ್ ಫೆಹ್ಲುಕ್ವಾಯೊ, ಕಗಿಸೊ ರಬಾಡ, ಡ್ಯುಬ್ರೇಸ್ ಶಮ್ವಾನ್ , ಲಿಜಾಡ್ ವಿಲಿಯಮ್ಸ್

ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ ( ನಾಯಕ ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ

ಇದನ್ನೂ ಓದಿ : ವಿಶ್ವಕಪ್‌ ಸೆಮೀಸ್‌ನಲ್ಲಿ ಭಾರತಕ್ಕೆ ಸಿಹಿಗಿಂತ ಕಹಿಯೇ ಜಾಸ್ತಿ..! ಅಂಕಿ ಅಂಶ ಇಲ್ಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More