Home> Technology
Advertisement

ಅತ್ಯಂತ ಅಗ್ಗದ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ Samsung Galaxy A06 ಸ್ಮಾರ್ಟ್‌ಫೋನ್

Samsung Galaxy A06: ಸ್ಯಾಮ್‌ಸಂಗ್ ಗ್ಯಾಲಕ್ಸಿ A06 ಸ್ಮಾರ್ಟ್‌ಫೋನ್ ಅತ್ಯಂತ ಅಗ್ಗದ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಇದರ ವೈಶಿಷ್ಟ್ಯಗಳನ್ನು ತಿಳಿಯಿರಿ. 

ಅತ್ಯಂತ ಅಗ್ಗದ ಬೆಲೆಯಲ್ಲಿ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ Samsung Galaxy A06 ಸ್ಮಾರ್ಟ್‌ಫೋನ್

Samsung Galaxy A06 In Cheapest Price: ಸ್ಯಾಮ್‌ಸಂಗ್ ಕಂಪನಿಯ ಅತ್ಯಂತ ಅಗ್ಗದ ದರದಲ್ಲಿ  ಸ್ಯಾಮ್‌ಸಂಗ್ ಗ್ಯಾಲಕ್ಸಿ A06  ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಕೈಗೆಟುಕುವ ದರದಲ್ಲಿ ಖರೀದಿಸಲು ಸಾಧ್ಯವಾಗುವ ಈ ಸ್ಮಾರ್ಟ್‌ಫೋನ್‌ನಲ್ಲಿ ದುಬಾರಿ ಸ್ಮಾರ್ಟ್‌ಫೋನ್‌ಗಳಲ್ಲಿ ಲಭ್ಯವಿರುವ ಹಲವು ವೈಶಿಷ್ಟ್ಯಗಳನ್ನು ಒದಗಿಸಲಾಗಿದೆ. ಇದರ ಬೆಲೆ 10,000 ರೂ.ಗಳಿಗಿಂತಲೂ ಕಡಿಮೆ. 

ಸ್ಯಾಮ್‌ಸಂಗ್ ಗ್ಯಾಲಕ್ಸಿ A06  ಸ್ಮಾರ್ಟ್‌ಫೋನ್ ವೈಶಿಷ್ಟ್ಯಗಳು (Samsung Galaxy A06 Smartphone Features): 
ಸ್ಯಾಮ್‌ಸಂಗ್ ಗ್ಯಾಲಕ್ಸಿ A06  ಸ್ಮಾರ್ಟ್‌ಫೋನ್ 6.7-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದ್ದು, ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ ಜಿ85 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುವ ಈ ಸ್ಮಾರ್ಟ್‌ಫೋನ್ ನ ಸ್ಕ್ರೀನ್ ರೆಸಲ್ಯೂಶನ್ 720 x 1,600 ಪಿಕ್ಸೆಲ್‌ಗಳು. ಇದರಲ್ಲಿ ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಕೂಡ ಲಭ್ಯವಿದ್ದು, ಬಳಕೆದಾರರು 1TB ವರೆಗೆ ಡೇಟಾ ಸಂಗ್ರಹಣೆಯನ್ನು ವಿಸ್ತರಿಸಬಹುದು. 

ಇದನ್ನೂ ಓದಿ- Jio ₹175 ಪ್ಲಾನ್​ನಲ್ಲಿ ಹೈ ಸ್ಪೀಡ್ ಇಂಟರ್ನೆಟ್ ಜೊತೆ ಓ‌ಟಿ‌ಟಿ ಪ್ರವೇಶವೂ ಉಚಿತ

ಆಂಡ್ರಾಯ್ಡ್ 14 ಓಎಸ್ ಆಧಾರಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ06 ಸ್ಮಾರ್ಟ್‌ಫೋನ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಪ್ರಾಥಮಿಕ ಸಂವೇದಕ 50MP ಆಗಿದ್ದರೆ 2MP ಡೆಪ್ತ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮರಾಗಳನ್ನು ಒದಗಿಸಲಾಗಿದೆ. ಅಷ್ಟೇ ಅಲ್ಲ, ವೀಡಿಯೊ ಕರೆ ಮತ್ತು ಸೆಲ್ಫಿಯ ಅನುಕೂಲಕ್ಕಾಗಿ, ಇದು ಪಂಚ್ ಹೋಲ್ ಡಿಸ್ಪ್ಲೇಯೊಂದಿಗೆ 8MP ಫ್ರಂಟ್ ಕ್ಯಾಮೆರಾವನ್ನು ಇದರಲ್ಲಿ ನೀಡಲಾಗಿದೆ. ಅಲ್ಲದೆ, ಭದ್ರತೆಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಒದಗಿಸಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ06 ಬ್ಯಾಟರಿ ಸಾಮರ್ಥ್ಯ (Samsung Galaxy A06 Battery Capacity): 
ಸ್ಯಾಮ್‌ಸಂಗ್‌ನ ಗ್ಯಾಲಕ್ಸಿ ಎ06 ಸ್ಮಾರ್ಟ್‌ಫೋನ್ 5,000mAh ನ ಶಕ್ತಿಶಾಲಿ ಬ್ಯಾಟರಿಯನ್ನು ಹೊಂದಿದೆ. ಇದು ವೇಗದ ಚಾರ್ಜಿಂಗ್ ಬೆಂಬಲ ಮತ್ತು USB ಟೈಪ್ C ಬೆಂಬಲವನ್ನು ಸಹ ಹೊಂದಿದೆ. 

ಇದನ್ನೂ ಓದಿ- ಉತ್ತಮ ಮೈಲೇಜ್ ಜೊತೆಗೆ EV ರೂಪದಲ್ಲಿ ಮತ್ತೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ ರತನ್ ಟಾಟಾ ಕನಸಿನ ಕಾರ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ06 ಸ್ಮಾರ್ಟ್‌ಫೋನ್ ಬೆಲೆ (Samsung Galaxy A06 Smartphone Price): 
ಭಾರತೀಯ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ06 ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. 4GB + 64GB ಸಂಗ್ರಹಣೆ ಸಾಮರ್ಥ್ಯ ಹೊಂದಿರುವ ಈ ಸ್ಮಾರ್ಟ್‌ಫೋನ್ ಮೂಲ ಮಾದರಿಯ ಬೆಲೆ 9,999 ರೂ.  ಮತ್ತು ಯ B + 128GB ಸ್ಟೋರೇಜ್ ಮಾದರಿಯ ಬೆಲೆ 11,499 ರೂ. ಆಗಿರಲಿದೆ. 

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ06 ಸ್ಮಾರ್ಟ್‌ಫೋನ್ ಬಣ್ಣಗಳ ಆಯ್ಕೆ ಮತ್ತು ಲಭ್ಯತೆ (Samsung Galaxy A06 smartphone color options and availability): 
ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ06 ಸ್ಮಾರ್ಟ್‌ಫೋನ್ ಸ್ಮಾರ್ಟ್‌ಫೋನ್ ಕಪ್ಪು, ಚಿನ್ನ ಮತ್ತು ತಿಳಿ ನೀಲಿ ಬಣ್ಣದ ರೂಪಾಂತರಗಳಲ್ಲಿ ಲಭ್ಯವಿರುತ್ತದೆ. ಗ್ರಾಹಕರು ಇದನ್ನು ಸ್ಯಾಮ್‌ಸಂಗ್ ಇಂಡಿಯಾ ವೆಬ್‌ಸೈಟ್‌ನಿಂದ ಖರೀದಿಸಬಹುದಾಗಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More