Home> Viral
Advertisement

Viral News: ʼಮೊದಲ ರಾತ್ರಿʼಯ ಟೆನ್ಶನ್‌ಗೆ ವರ ಆತ್ಮಹತ್ಯೆ..?

Uttar Pradesh Viral News: ಆತ್ಮಹತ್ಯೆ ಮಾಡಿಕೊಂಡ ವರನನ್ನು 24 ವರ್ಷದ ಸತ್ಯೇಂದ್ರ ಎಂದು ಗುರುತಿಸಲಾಗಿದೆ. ಈತ ವಿನಿತಾ ಕುಮಾರಿ ಎಂಬಾಕೆಯೊಂದಿಗೆ ಅದ್ಧೂರಿಯಾಗಿ ಮದುವೆಯಾಗಿದ್ದ. ನಂತರ ಮದುವೆ ದಿಬ್ಬಣವು ಭರ್ಜರಿ ಮೆರವಣಿಗೆಯೊಂದಿಗೆ ಆತನ ಗ್ರಾಮಕ್ಕೆ ಮರಳಿತ್ತು. ​

Viral News: ʼಮೊದಲ ರಾತ್ರಿʼಯ ಟೆನ್ಶನ್‌ಗೆ ವರ ಆತ್ಮಹತ್ಯೆ..?

UP Viral News: ʼಫಸ್ಟ್‌ ನೈಟ್‌ʼನ ಟೆನ್ಶನ್‌ಗೆ ವರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು ಮೊದಲ ರಾತ್ರಿಗಾಗಿ ಕೋಣೆಗೆ ಹಾಲು ತೆಗೆದುಕೊಂಡು ಹೋಗಿದ್ದಳು. ಆದರೆ ಅಲ್ಲಿ ವರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ.

ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ರತನ್ಪುರ ಗ್ರಾಮದಲ್ಲಿ ಅತ್ಯಂತ ಸಂಭ್ರಮದಿಂದಲೇ ಮದುವೆ ನಡೆದಿತ್ತು. ಮದುವೆ ಆಚರಣೆ ಮುಗಿದ ನಂತರ ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ದೃಶ್ಯ ನೋಡಿದ ವಧುವಿಗೆ ಆಘಾತವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಇದನ್ನೂ ಓದಿ: Hathras tragedy: ಹೆಣಗಳ ರಾಶಿ ನೋಡಿ ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಹೃದಯಾಘಾತ!

ಆತ್ಮಹತ್ಯೆ ಮಾಡಿಕೊಂಡ ವರನನ್ನು 24 ವರ್ಷದ ಸತ್ಯೇಂದ್ರ ಎಂದು ಗುರುತಿಸಲಾಗಿದೆ. ಈತ ವಿನಿತಾ ಕುಮಾರಿ ಎಂಬಾಕೆಯೊಂದಿಗೆ ಅದ್ಧೂರಿಯಾಗಿ ಮದುವೆಯಾಗಿದ್ದ. ನಂತರ ಮದುವೆ ದಿಬ್ಬಣವು ಭರ್ಜರಿ ಮೆರವಣಿಗೆಯೊಂದಿಗೆ ಆತನ ಗ್ರಾಮಕ್ಕೆ ಮರಳಿತ್ತು. ನವವಿವಾಹಿತ ವಧುವನ್ನು ಮನೆಗೆ ಸಂಭ್ರಮದಿಂದ ಸ್ವಾಗತಿಸಲಾಗಿತ್ತು. ಅದೇ ರೀತಿ ವಧು-ವರರ ಮೊದಲ ರಾತ್ರಿಗೆ ಸಿದ್ಧತೆ ಮಾಡಲಾಗಿತ್ತು. ಆದರೆ ವಧು ಹಾಲು ಹಿಡಿದುಕೊಂಡು ಪತಿಯ ಕೋಣೆಗೆ ಹೋದಾಗ ಆತ ಮದುವೆ ಉಡುಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನು ಕಂಡ ವಧು ಆಘಾತಕ್ಕೊಳಗಾಗಿದ್ದು, ಕುಟುಂಬಸ್ಥರಿಗೂ ಸಹ ಶಾಕ್‌ ಆಗಿದೆ. 

ಈ ಬಗ್ಗೆ ಉಸ್ರಾಹರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಸತೇಂದ್ರನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಸತ್ಯೇಂದ್ರ ಯಾಕೆ ಆತ್ಮಹತ್ಯೆ ಮಾಡಿಕೊಂಡ ಅನ್ನೋದರ ಬಗ್ಗೆ ನಿಖರ ಮಾಹಿತಿ ಗೊತ್ತಾಗಿಲ್ಲ. ಮೊದಲ ರಾತ್ರಿಯ ಟೆನ್ಶನ್‌ಗೆ ಆತ್ಮಹತ್ಯೆ ಮಾಡಿಕೊಂಡಿರಬಹುದಾ? ಅಂತಾ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

ಇದನ್ನೂ ಓದಿ: ಅಂಬಾನಿ ಪುತ್ರನ ಮದುವೆಗೆ ಆಗಮಿಸಿದಕ್ಕೆ ಪಾಪ್ ಸಿಂಗರ್ ಜಸ್ಟೀನ್ ಬೈಬರ್ ಪಡೆದ ಸಂಭಾವನೆ ಎಷ್ಟು ಕೋಟಿ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More