Home> World
Advertisement

ಪಾಕಿಸ್ತಾನಕ್ಕೆ ಬುದ್ಧಿ ಮಾತು ಹೇಳಿದ ಚೀನಾ

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವುದಾಗಿ ಮತ್ತು ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸುವುದಾಗಿ ಪಾಕಿಸ್ತಾನ ಘೋಷಿಸಿತ್ತು. ಈಗ ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ತಪ್ಪಿಸಲು ಪಾಕ್ ಗೆ ಚೀನಾ ಸೂಚಿಸಿದೆ ಎನ್ನಲಾಗಿದೆ. 

ಪಾಕಿಸ್ತಾನಕ್ಕೆ ಬುದ್ಧಿ ಮಾತು ಹೇಳಿದ ಚೀನಾ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸುವುದಾಗಿ ಮತ್ತು ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸುವುದಾಗಿ ಪಾಕಿಸ್ತಾನ ಘೋಷಿಸಿತ್ತು. ಈಗ ಪರಿಸ್ಥಿತಿ ಉಲ್ಬಣಗೊಳ್ಳುವುದನ್ನು ತಪ್ಪಿಸಲು ಪಾಕ್ ಗೆ ಚೀನಾ ಸೂಚಿಸಿದೆ ಎನ್ನಲಾಗಿದೆ. 

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆಯಲ್ಲಿ, ಈ ವಿಷಯವನ್ನು ಭದ್ರತಾ ಮಂಡಳಿ ಸೇರಿದಂತೆ ವಿಶ್ವಸಂಸ್ಥೆಗೆ ಕೊಂಡೊಯ್ಯಲಾಗುವುದು ಎಂದು ಹೇಳಿದ್ದಲ್ಲದೆ, ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸಿ ಭಾರತೀಯ ರಾಯಭಾರಿಯನ್ನು ಹೊರಹಾಕಿತು.

ಈ ಸಭೆಯಲ್ಲಿ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು, ಆಂತರಿಕ ಸಚಿವರು, ಶಿಕ್ಷಣ ಸಚಿವರು, ಮಾನವ ಹಕ್ಕುಗಳ ಸಚಿವರು, ಕೆಎ ಮತ್ತು ಜಿಬಿ ಸಚಿವರು, ಕಾನೂನು ಸಚಿವರು, ಹಣಕಾಸು ಸಲಹೆಗಾರ, ಸಿಜೆಸಿಎಸ್ಸಿ, ಸಿಒಎಎಸ್, ಸಿಎಎಸ್, ವಿ-ಸಿಎನ್ಎಸ್, ಎಸ್‌ಎಪಿಎಂ ಮಾಹಿತಿ, ಡಿಜಿ-ಐಎಸ್‌ಐ , ಡಿಜಿ-ಐಎಸ್‌ಪಿಆರ್, ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಮತ್ತು ಪಾಕಿಸ್ತಾನದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ಭಾರತದ ನಿರ್ಧಾರವನ್ನು ವಿರೋಧಿಸಿ ಅದು ಲಭ್ಯವಿರುವ ಎಲ್ಲ ಆಯ್ಕೆಗಳನ್ನು ಬಳಸಿಕೊಳ್ಳಲಿದೆ ಎಂದು ಪಿಎಂ ಖಾನ್ ಹೇಳಿದರು. ಇನ್ನು ಆಗಸ್ಟ್ 14 ರಂದು ಪಾಕ್ ನ  ಸ್ವಾತಂತ್ರ್ಯ ದಿನವನ್ನು ಕಾಶ್ಮೀರಿಗಳ ಹೋರಾಟಕ್ಕೆ ಸಮರ್ಪಿಸಲಾಗುವುದು ಎಂದು ಘೋಷಿಸಿದ್ದರು. 

Read More