Home> World
Advertisement

ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿದ ಚೀನಾಗೆ ತಕ್ಕ ಉತ್ತರ ನೀಡಿದ ಭಾರತ

ಜಮ್ಮು ಮತ್ತು ಕಾಶ್ಮೀರದ ಇತ್ತೀಚಿನ ಬೆಳವಣಿಗೆಗಳು ಸಂಪೂರ್ಣವಾಗಿ ಭಾರತಕ್ಕೆ ಆಂತರಿಕ ವಿಷಯವಾಗಿದೆ, ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಎಂದು ಚೀನಾ ಗೌರವಿಸಬೇಕು ಎಂದು ಸರ್ಕಾರ ಹೇಳಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿದ ಚೀನಾಗೆ ತಕ್ಕ ಉತ್ತರ ನೀಡಿದ ಭಾರತ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಇತ್ತೀಚಿನ ಬೆಳವಣಿಗೆಗಳು ಸಂಪೂರ್ಣವಾಗಿ ಭಾರತಕ್ಕೆ ಆಂತರಿಕ ವಿಷಯವಾಗಿದೆ, ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಎಂದು ಚೀನಾ ಗೌರವಿಸಬೇಕು ಎಂದು ಸರ್ಕಾರ ಹೇಳಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಕಾನೂನುಬಾಹಿರವಾಗಿದೆ ಎಂದು ಭಾರತ ಉಲ್ಲೇಖಿಸಿದೆ, ಇತರ ವಿಧಾನಗಳಿದ್ದರೂ ಸಹಿತ ಈ ಪ್ರದೇಶದಲ್ಲಿ ಯಥಾಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳನ್ನು ಮಾಡಲಾಗಿದೆ. ಪಶ್ಚಿಮ ಚೀನಾದ ಕಾಶ್ಗರ್ ಅನ್ನು ಪಾಕಿಸ್ತಾನದ ಗ್ವಾಡರ್ ಬಂದರಿನೊಂದಿಗೆ 3,000 ಕಿಲೋಮೀಟರ್ ದೂರದಲ್ಲಿ ಸಂಪರ್ಕಿಸುವ 50 ಬಿಲಿಯನ್ ಮೊತ್ತದ ಕಾರಿಡಾರ್ ಭಾರತ ಮತ್ತು ಚೀನಾ ಸಂಬಂಧದ ವಿಚಾರದಲ್ಲಿ ವಿವಾದ ಸೃಷ್ಟಿಸಿದೆ. ಪಿಓಕೆಯನ್ನು ಹಾದುಹೋಗುವ ಈ ಕಾರಿಡಾರ್ ಗೆ ಭಾರತ ಮೊದಲಿನಿಂದಲೂ ಪ್ರತಿಭಟಿಸುತ್ತಾ ಬಂದಿದೆ.

74ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧಿವೇಶನದಲ್ಲಿ ಚೀನಾ ದೇಶವು ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆ ಮಾರ್ಗಸೂಚಿ ಹಾಗೂ ಭದ್ರತಾ ಮಂಡಳಿ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಕ್ಕೆ ಅನುಗುಣವಾಗಿ ಶಾಂತಿಯುತವಾಗಿ ಮತ್ತು ಸರಿಯಾಗಿ ಪರಿಹರಿಸಬೇಕು ಎಂದು ಚೀನಾದ ರಾಜ್ಯ ಮಾಧ್ಯಮ ಕ್ಸಿನ್ಹುವಾ ವರದಿ ಮಾಡಿದೆ. ಏಕಪಕ್ಷೀಯವಾಗಿ ಯಥಾಸ್ಥಿತಿಯನ್ನು ಬದಲಾಯಿಸುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ವಾಂಗ್ ಹೇಳಿದ್ದಾರೆ.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಭಾರತ 'ಜಮ್ಮು, ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿದೆ ಎಂಬ ಭಾರತದ ನಿಲುವನ್ನು ಚೀನಾ ಚೆನ್ನಾಗಿ ತಿಳಿದಿದೆ ಮತ್ತು ಇತ್ತೀಚಿನ ಬೆಳವಣಿಗೆಗಳು ಸಂಪೂರ್ಣವಾಗಿ ನಮಗೆ ಆಂತರಿಕ ವಿಷಯವಾಗಿದೆ ಎಂದು ಹೇಳಿದೆ.

  

Read More