Home> World
Advertisement

26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ 10 ವರ್ಷಗಳ ಜೈಲು ಶಿಕ್ಷೆ

26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ಗೆ ಎರಡು ಭಯೋತ್ಪಾದನೆ ಪ್ರಕರಣಗಳಲ್ಲಿ ಪಾಕಿಸ್ತಾನದ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ 10 ವರ್ಷಗಳ ಜೈಲು ಶಿಕ್ಷೆ

ನವದೆಹಲಿ: 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ಗೆ ಎರಡು ಭಯೋತ್ಪಾದನೆ ಪ್ರಕರಣಗಳಲ್ಲಿ ಪಾಕಿಸ್ತಾನದ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪಾಕಿಸ್ತಾನದ ಲಾಹೋರ್‌ನಲ್ಲಿ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಬಂಧನ

ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ಯ ಸಹ ಸಂಘಟನೆಯಾದ ಜಮಾಅತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಭಯೋತ್ಪಾದನೆ ಪ್ರಕರಣದಲ್ಲಿ ಪಾಕಿಸ್ತಾನದ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು ಇದೇ ಮೊದಲಲ್ಲ. ಫೆಬ್ರವರಿಯಲ್ಲಿ, ಭಯೋತ್ಪಾದನೆ-ಹಣಕಾಸು ಪ್ರಕರಣದಲ್ಲಿ ಹಫೀಜ್ ಸಯೀದ್ ಮತ್ತು ಅವರ ಕೆಲವು ಸಹಾಯಕರು ಶಿಕ್ಷೆಗೊಳಗಾದರು ಮತ್ತು 11 ವರ್ಷ ಶಿಕ್ಷೆ ವಿಧಿಸಲಾಗಿತ್ತು.

ಲಾಹೋರ್‌ನ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಗುರುವಾರ ಜಮಾತ್-ಉದ್-ದವಾ ನಾಲ್ಕು ನಾಯಕರಿಗೆ ಅದರ ಮುಖ್ಯಸ್ಥ ಹಫೀಜ್ ಸಯೀದ್ ಸೇರಿದಂತೆ ಇನ್ನೂ ಎರಡು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದೆ" ಎಂದು ಪಿಟಿಐ ನ್ಯಾಯಾಲಯದ ಅಧಿಕಾರಿಯನ್ನು ಉಲ್ಲೇಖಿಸಿದೆ.ಹಫೀಜ್ ಸಯೀದ್ ಮತ್ತು ಅವರ ಇಬ್ಬರು ಸಹಾಯಕರಾದ ಜಾಫರ್ ಇಕ್ಬಾಲ್ ಮತ್ತು ಯಾಹ್ಯಾ ಮುಜಾಹಿದ್ ಅವರಿಗೆ ತಲಾ 10 ಮತ್ತು ಒಂದೂವರೆ ವರ್ಷ ಶಿಕ್ಷೆ ವಿಧಿಸಲಾಗಿದ್ದು, ಅವರ ಸೋದರ ಮಾವ ಅಬ್ದುಲ್ ರೆಹಮಾನ್ ಮಕ್ಕಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಸೈಯೀದ್ ಸಂಘಟನೆಗಳಿಗೆ ಪಾಕ್ ನಿಷೇಧ

2008 ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಗೆ ಅವರು ಕಾರಣಕರ್ತರಾಗಿದ್ದರು,ಆ ಸಂದರ್ಭದಲ್ಲಿ ಸುಮಾರು 166 ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. ಭಯೋತ್ಪಾದನೆ-ಹಣಕಾಸು ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ವರ್ಷ ಜುಲೈನಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಲಾಹೋರ್‌ನ ಹೈ ಸೆಕ್ಯುರಿಟಿ ಕೋಟ್ ಲಖ್‌ಪತ್ ಜೈಲಿನಲ್ಲಿ ಇರಿಸಲಾಗಿದೆ.
 

Read More