Home> World
Advertisement

ಕಾಶ್ಮೀರ ವಿಚಾರವಾಗಿ ಹೆಚ್ಚಿನ ಸಂಯಮದಿಂದಿರಲು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮನವಿ

ವಿಶ್ವಸಂಸ್ಥೆ  ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಭಾರತ ಮತ್ತು ಪಾಕಿಸ್ತಾನ ಹೆಚ್ಚಿನ ಸಂಯಮ ತಾಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಕಾಶ್ಮೀರ ವಿಚಾರವಾಗಿ ಹೆಚ್ಚಿನ ಸಂಯಮದಿಂದಿರಲು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮನವಿ

ವಿಶ್ವಸಂಸ್ಥೆ: ವಿಶ್ವಸಂಸ್ಥೆ  ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಭಾರತ ಮತ್ತು ಪಾಕಿಸ್ತಾನ ಹೆಚ್ಚಿನ ಸಂಯಮ ತಾಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸ್ಥಿತಿಯ ಮೇಲೆ ಪರಿಣಾಮ ಬೀರುವಂತಹ ಕ್ರಮಗಳನ್ನು ಯಾವುದೇ ತೆಗೆದುಕೊಳ್ಳದಂತೆ ಅವರು ಒತ್ತಾಯಿಸಿದ್ದಾರೆ. ಕಾಶ್ಮೀರದ ವಿಚಾರದಲ್ಲಿ ಯಾವುದೇ ತೃತೀಯ ಮಧ್ಯಸ್ಥಿಕೆಯನ್ನು ತಿರಸ್ಕರಿಸುವ ಸಿಮ್ಲಾ ಒಪ್ಪಂದವನ್ನು ಅವರು ಎತ್ತಿ ಹಿಡಿದಿದ್ದಾರೆ ಎನ್ನಲಾಗಿದೆ.

ಭಾರತ ಸೋಮವಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿಯನ್ನು ಹಿಂತೆಗೆದುಕೊಂಡ ನಂತರ ಮತ್ತು ಕಾಶ್ಮೀರವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ಈ ಹಿನ್ನಲೆಯಲ್ಲಿ ಈಗ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಈ ಹೇಳಿಕೆ ನೀಡಿದ್ದಾರೆ."ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಯವರು ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ಗರಿಷ್ಠ ಉಭಯ ದೇಶಗಳು ನಡುವೆ ಸಂಯಮ ಅಗತ್ಯ ಎಂದು ಮನವಿ ಮಾಡಿದ್ದಾರೆ "ಎಂದು ಗುಟೆರೆಸ್ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತಾದ 1972 ರ ಸಿಮ್ಲಾ ಒಪ್ಪಂದವನ್ನು ಸ್ಮರಿಸಿದ ಪ್ರಧಾನ ಕಾರ್ಯದರ್ಶಿ ಅವರು ಜಮ್ಮು ಮತ್ತು ಕಾಶ್ಮೀರದ ಅಂತಿಮ ಸ್ಥಾನಮಾನವನ್ನು ಶಾಂತಿಯುತ ವಿಧಾನಗಳಿಂದ ಇತ್ಯರ್ಥಪಡಿಸಬೇಕು ಎಂದು ಹೇಳಿದ್ದಾರೆ ಎಂದು ಗುಟೆರೆಸ್ ವಕ್ತಾರ ಸ್ಟೀಫನ್ ಡುಜಾರಿಕ್  ತಿಳಿಸಿದರು.ಆದರೆ ಕಾಶ್ಮೀರದ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸುವ ಯಾವುದೇ ಪ್ರಸ್ತಾಪವನ್ನೂ ಮಾಡಲಿಲ್ಲ ಎನ್ನಲಾಗಿದೆ.ಆಂಟೋನಿಯೊ ಗುಟೆರೆಸ್ ಜಮ್ಮು ಮತ್ತು ಕಾಶ್ಮೀರದ ಸ್ಥಿತಿಯ ಮೇಲೆ ಪರಿಣಾಮ ಬೀರಬಹುದಾದ ಕ್ರಮಗಳನ್ನು ತೆಗೆದುಕೊಳ್ಳದಂತೆ ತಡೆಯಲು ಎಲ್ಲಾ ಪಕ್ಷಗಳಿಗೆ ಕರೆ ನೀಡಿದರು.

 ಭಾರತದ ಕ್ರಮವನ್ನು ಪಾಕಿಸ್ತಾನವು ಏಕಪಕ್ಷೀಯ ಮತ್ತು ಕಾನೂನುಬಾಹಿರ ಎಂದು ಕರೆದಿದೆ ಮತ್ತು ಈ ವಿಷಯವನ್ನು ಯುಎನ್ ಭದ್ರತಾ ಮಂಡಳಿಗೆ ಕೊಂಡೊಯ್ಯುವುದಾಗಿ ಹೇಳಿತ್ತು.

Read More